ಮೈಸೂರು: ಅನಾರೋಗ್ಯದಿಂದಿದಾಗಿ ಇಹಲೋಕ ತ್ಯಜಿಸಿರುವ ಮಾಜಿ ಸಂಸದ ಹಾಗೂ ನಾಯಕ ವಿ. ಶ್ರೀನಿವಾಸ್ ಪ್ರಸಾದ್ (Srinivasa Prasad) ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಅಶೋಕಪುರಂನ ಡಾ. ಬಿ.ಆರ್. ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಬೌದ್ಧ ಧರ್ಮದ ವಿದಿ-ವಿಧಾನದಂತೆ ನಡೆಸಲಾಯಿತು.
ಮಹಾಬೋಧಿಯ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ವಿಧಿ-ವಿಧಾನಗಳು ನಡೆದವು. ಸುಮಾರು 15ಕ್ಕೂ ಅಧಿಕ ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ನಡೆಯಿತು. ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ಪುಣ್ಯಾನುಮೋದನೆ ನಂತರ ಕುಟುಂಬಸ್ಥರು ಗೌರವ ಸಲ್ಲಿಸಿದರು. ಆನಂತರ ಅಂತ್ಯಕ್ರಿಯೆ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಗಣ್ಯರು, ನಾಯಕರು, ಅಭಿಮಾನಿಗಳು ಇದ್ದರು. ಅಂತ್ಯಕ್ರಿಯೆಗೂ ಮುನ್ನ ಹಲವಾರು ನಾಯಕರು ವಿ.ಶ್ರಿನಿವಾಸ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿದ್ದರು.