
ಬೆಂಗಳೂರು: ತಡರಾತ್ರಿ ಕಾಂಗ್ರೆಸ್ ಮುಖಂಡನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆ ಬಳಿ ಹೈಡ್ರಾಮಾವೇ ನಡೆದಿದ್ದು, ಲಾಂಗು, ಮಚ್ಚು ಹಿಡಿದು ಝಳಪಿಸಿದ್ದಾರೆ ಬೆಂಬಲಿಗರು.
ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ ಆಗಿದ್ದಾನೆ. ಲೈವ್ ಬ್ಯಾಂಡ್ನಿಂದ ಹೊರಕ್ಕೆ ಬರ್ತಿದ್ದಂತೆ ಅಡ್ಡಗಟ್ಟಿ ಕೊಲೆ ಮಾಡಲಾಗಿದೆ. ಬೈಕ್ನಲ್ಲಿ ಬಂದಿದ್ದ ಆರೋಪಿಗಳಿಂದ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಅಶೋಕನಗರದ ಗರುಡ ಮಾಲ್ ಬಳಿ ನಿನ್ನೆ ತಡರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಲೈವ್ ಬ್ಯಾಂಡ್ ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್ನಲ್ಲಿ ಬರ್ತಿದ್ದ ಹೈದರ್ ಅಲಿ ಮೇಲೆ ದಾಳಿ ಮಾಡಿ ಕೊಲೆ ಮಾಡಲಾಗಿದೆ.

ಲೈವ್ ಬ್ಯಾಂಡ್ನಿಂದ ಹೊರ ಬಂದ ಬಳಿಕ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ. ಜೊತೆಯಲ್ಲಿದ್ದ ಸ್ನೇಹಿತನಿಗೂ ಮಚ್ಚಿನ ಏಟು ಬಿದ್ದಿದ್ದು ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಕ್ತದ ಮಡುವಲ್ಲಿ ಬಿದ್ದಿದ್ದ ಹೈದರ್ನನ್ನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು, ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಆನೆಪಾಳ್ಯ ನಿವಾಸಿ ಆಗಿದ್ದ ಹೈದರ್ ಅಲಿ ಬೆಂಬಲಿಗರು ವಿಚಾರ ತಿಳಿಯುತ್ತಿದ್ದಂತೆ ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿದ್ದರು. ಸಾವಿರಾರು ಜನ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಿದ್ದಾರೆ ಪೊಲೀಸರು.
ಶಾಸಕ ಎನ್.ಎ ಹ್ಯಾರಿಸ್ ಜೊತೆ ಗುರ್ತಿಸಿಕೊಂಡಿದ್ದ ಹೈದರ್ ಅಲಿ, ಹ್ಯಾರಿಸ್ ಪರ ಪ್ರಚಾರ ಕಾರ್ಯದಲ್ಲೂ ಭಾಗಿಯಾಗಿರ್ತಿದ್ದರು. ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರ ಹುಡುಕಾಟ ನಡೆಸ್ತಿದ್ದಾರೆ.