ನವದೆಹಲಿ: ಪಶ್ಚಿಮ ನೇಪಾಳದಲ್ಲಿ ಸಂಭವಿಸಿದ ಭಾರೀ ಭೂಕಂಪದಿಂದಾಗಿ ಇದುವರೆಗೆ 128 ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ಗಾಯಗೊಂಡಿದ್ದಾರೆ.
ಭೂಕಂಪದಿಂದ ಹಲವು ಮನೆಗಳು ಧರಾಶಾಹಿಯಾಗಿವೆ. ರುಕುಮ್ ಪಶ್ಚಿಮದಲ್ಲಿ 35 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ರೆ, ಜಾಜರ್ಕೋಟ್ ಜಿಲ್ಲೆಯಲ್ಲಿ 90 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ನೇಪಾಳದ ಅಧಿಕಾರಿಗಳು ದೃಢಪಡಿಸಿದ್ದಾರೆ.

ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.4 ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲ, ಪಶ್ಚಿಮ ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಕನಿಷ್ಠ 140 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಭಾರತ-ನೇಪಾಳ ಗಡಿಯಲ್ಲಿರುವ ಕತಿಹಾರ್, ಮೋತಿಹಾರಿ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಕಂಪನದ ಅನುಭವವಾಗಿದೆ.