• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಅಪಘಾತ, ಸಾವುಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ!: ಕೈ ಹಿಡಿದ ಪೋಲಿಸರ ಪ್ಲ್ಯಾನ್..!

ಪ್ರತಿಧ್ವನಿ by ಪ್ರತಿಧ್ವನಿ
September 4, 2023
in ಇದೀಗ, ಕರ್ನಾಟಕ
0
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಅಪಘಾತ, ಸಾವುಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ!: ಕೈ ಹಿಡಿದ ಪೋಲಿಸರ ಪ್ಲ್ಯಾನ್..!

ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್‌ ವೇ ಹೆದ್ದಾರಿ

Share on WhatsAppShare on FacebookShare on Telegram

ADVERTISEMENT

ಬೆಂಗಳೂರು-ಮೈಸೂರು (BANGALORE-MYSORE) ಹೆದ್ದಾರಿಯಲ್ಲಿ (HIGHWAY)ಹಲವಾರು ಸೂಕ್ತ ಕ್ರಮಗಳನ್ನು ಅಳವಡಿಸಿಕೊಂಡ ನಂತರ ಇದೀಗ ಸಾವಿನ ಸಂಖ್ಯೆ ಕಡಿಮೆಯಾಗಿದೆ. ಮೇ ತಿಂಗಳಲ್ಲಿ ಸಾವಿನ ಸಂಖ್ಯೆ 29 ಆಗಿತ್ತು, ಇದು ಆಗಸ್ಟ್‌ನಲ್ಲಿ (august) 6ಕ್ಕೆ ಇಳಿದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿದ್ದ ಸಾವು-ನೋವುಗಳನ್ನು ಕಡಿಮೆ ಮಾಡಲು ನಮ್ಮ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ಸಾವಿನ ಸಂಖ್ಯೆ ಮೇ ತಿಂಗಳಲ್ಲಿ 29, ಜೂನ್‌ನಲ್ಲಿ 28, ಜುಲೈನಲ್ಲಿ 8 ಮತ್ತು ಆಗಸ್ಟ್‌ನಲ್ಲಿ 6ಕ್ಕೆ ಇಳಿದಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನುಸಹ ಓದಿ: ಜಿ 20 ಶೃಂಗಸಭೆಗೆ ಸೇರ್ಪಡೆಯಾಗಲಿದೆ ಆಫ್ರಿಕನ್ಒಕ್ಕೂಟ | ಹೊಸಸದಸ್ಯನೊಂದಿಗೆಈಗಜಿ 21

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಉದ್ಘಾಟಿಸಿದಾಗಿನಿಂದ, ಅಪಘಾತಗಳ ಸಂಖ್ಯೆ ಹೆಚ್ಚಾಯಿತು ಮತ್ತು ಅನೇಕ ಪ್ರಯಾಣಿಕರು ಹೆದ್ದಾರಿಯಲ್ಲಿ ಸಾವಿಗೀಡಾಗಿದ್ದರು. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದ ಪೊಲೀಸ್ ಅಧಿಕಾರಿಗಳು ಜೂನ್‌ನಲ್ಲಿ ಈ ಯೋಜನೆಯನ್ನು ಪರಿಶೀಲಿಸಿ, ಅಪಘಾತಗಳನ್ನು ತಡೆಯಲು ಹಲವಾರು ಕ್ರಮಗಳನ್ನು ಕೈಗೊಂಡರು.

ಗಂಟೆಗೆ 100 ಕಿಮೀ ವೇಗವನ್ನು ಮೀರುವವರಿಗೆ ದಂಡ ವಿಧಿಸುವುದು ಮತ್ತು ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು, ಕ್ವಾಡ್ರಿಸೈಕಲ್‌ಗಳು ಮತ್ತು ಕೃಷಿ ವಾಹನಗಳ ಪ್ರವೇಶವನ್ನು ನಿಷೇಧಿಸಿದ್ದು ಪ್ರಮುಖ ಕ್ರಮಗಳಲ್ಲಿ ಒಂದಾಗಿದೆ. ಹೆದ್ದಾರಿಯಲ್ಲಿ ಗರಿಷ್ಠ ವೇಗವು ಕೇವಲ ಗಂಟೆಗೆ 100 ಕಿಮೀ ಮತ್ತು ಇತರರಿಗೆ ಗಂಟೆಗೆ 80 ಕಿಮೀ ಆಗಿತ್ತು. ಆದರೆ, ಗರಿಷ್ಠ ಸಂಖ್ಯೆಯ ಅಪಘಾತಗಳು ಮಿತಿಮೀರಿದ ವೇಗದಿಂದಾಗಿ ಉಂಟಾಗುತ್ತಿದ್ದವು. ವಾಹನಗಳು ಗಂಟೆಗೆ 160 ಕಿಮೀ ವೇಗದಲ್ಲಿ ಚಲಿಸುತ್ತಿದ್ದವು. ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತದ ಪ್ರಮಾಣವನ್ನು ಕಡಿಮೆ ಮಾಡಿದ ತಂಡಕ್ಕೆ ಅಲೋಕ್ ಕುಮಾರ್ ಧನ್ಯವಾದ ಅರ್ಪಿಸಿದರು ಮತ್ತು ಇಷ್ಟಕ್ಕೆ ಸಮಾಧಾನ ಪಟ್ಟುಕೊಂಡು ಸುಮ್ಮನೆ ಕೂರುವಂತಿಲ್ಲ ಎಂದು ಹೇಳಿದರು.

Tags: Accidentsbangalore mysoreBengaluru-Mysore ExpressKarantaka
Previous Post

ಜಿ 20 ಶೃಂಗಸಭೆಗೆ ಸೇರ್ಪಡೆಯಾಗಲಿದೆ ಆಫ್ರಿಕನ್ ಒಕ್ಕೂಟ | ಹೊಸ ಸದಸ್ಯನೊಂದಿಗೆ ಈಗ ಜಿ 21

Next Post

ಜಿ 20 ಶೃಂಗಸಭೆ | ಸೆ.8ಕ್ಕೆ ಜೋ ಬೈಡನ್, ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆ

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ಜಿ 20 ಶೃಂಗಸಭೆ

ಜಿ 20 ಶೃಂಗಸಭೆ | ಸೆ.8ಕ್ಕೆ ಜೋ ಬೈಡನ್, ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada