
ಬೆಂಗಳೂರು:ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 6 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾಳೆಕೆರೆ ಗ್ರಾಮದ ಬಳಿ ಈ ಘಟನೆ ನಡೆದಿದೆ.ಲಾರಿಗಳ ನಡುವೆ ಅಪಘಾತ ಸಂಭವಿಸಿ ಕಾರಿನ ಮೇಲೆ ಲಾರಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತ ಹಿನ್ನೆಲೆ ಘಟನೆ ನಡೆದ ಸ್ಥಳದಿಂದ 3 ಕಿ.ಮೀವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.