ಮಂತ್ರಿ ಮಾಲ್ (Mantri mall) ಒಳಗೆ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಂಜುನಾಥ್ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂಬ ಮಾಹಿತಿ ಲಭ್ಯವಾಗಿದೆ. 2 ಕೋಟಿ ಸಾಲ ಮಾಡಿ ತೀರಿಸಲಾಗದೇ ಅತ್ಮಹತ್ಯೆಗೆ ಶರಣಾಗಿರುವ ಶಂಕ್ಯೆ ವ್ಯಕ್ತವಾಗಿದೆ.

ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮಾಲ್ ನಲ್ಲಿ ನೆರೆದಿದ್ದ ಜನ ಕೆಲ ಕಾಲ ಘಟನೆಯಿಂದ ಆತಂಕಕ್ಕೆ ಒಳಗಾಗಿದ್ದಾರೆ.