ಸೌಜನ್ಯಾ ಪ್ರಕರಣ ನಡೆದು 11 ವರ್ಷವಾದರೂ ಆರೋಪಿಗಳಿಗೆ ಶಿಕ್ಷೆ ಆಗಿಲ್ಲ. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಮುಂದಿನ ತಿಂಗಳ ಆರಂಭದಲ್ಲಿ ಬೃಹತ್ ಪ್ರತಿಭಟನಾ ಸಭೆಯೊಂದನ್ನು ಹಮ್ಮಿಕೊಳ್ಳಲಾಗಿದೆ.
ದಶಕದಿಂದ ಸೌಜನ್ಯಾ ಪ್ರಕರಣದ ನ್ಯಾಯಕ್ಕಾಗಿ ಹೋರಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಯವರು ಪ್ರತಿಭಟನಾ ಸಭೆ ನಡೆಸಲು ಮುಂದಾಗಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ಬುಧವಾರ (ಆಗಸ್ಟ್ 16) ಸುದ್ದಿಗೋಷ್ಠಿ ನಡೆಸಿ ಮಹೇಶ್ ತಿಮರೋಡಿ ಮಾಹಿತಿ ನೀಡಿದರು. ಸೌಜನ್ಯ ಅತ್ಯಾಚಾರ ಕೊಲೆ ಮಾಡಿದ ಪಾಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಸೆ.3ರಂದು ಬೆಳಿಗ್ಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕು ಮೈದಾನದಲ್ಲಿ ಬೃಹತ್ ಪ್ರತಿಭಟನ ಸಭೆ ಆಯೋಜಿಸಿದ್ದೇವೆ ಎಂದು ತಿಳಿಸಿದರು.
2012ರಲ್ಲಿ ಮಂಗಳೂರು ಬೆಳ್ತಂಗಡಿ ತಾಲೂಕು ಗ್ರಾಮವೊಂದರ ಪ್ರಾಂಗಳದಲ್ಲಿ ಸೌಜನ್ಯಾ ಪ್ರಕರಣ ನಡೆದಿತ್ತು. ಪ್ರಕರಣ ನಡೆದು 11 ವರ್ಷವಾಗಿದ್ದರೂ ಈವರೆಗೂ ಆರೋಪಿಗಳು ಸಿಕ್ಕಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ರಾವ್ ಎಂಬ ಆರೋಪಿಯನ್ನು ಬಂಧಿಸಲಾಗಿತ್ತು. ಆದರೆ ಸುದೀರ್ಘ ವಿಚಾರಣೆಯ ಬಳಿಕವೂ ಯಾವುದೇ ಬಲವಾದ ಸಾಕ್ಷ್ಯ ಸಿಕ್ಕದ ಸಂತೋಷ್ ರಾವ್ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿ ಬಿಡುಗಡೆ ಮಾಡಿತ್ತು.
ಈ ಸುದ್ದಿ ಓದಿದ್ದೀರಾ? ರಾಜಕೀಯ ನಿವೃತ್ತಿಯಾಗುತ್ತೇನೆ, ಆದರೆ ಕಾಂಗ್ರೆಸ್ ಸೇರುವುದಿಲ್ಲ: ಶಾಸಕ ಮುನಿರತ್ನ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರೆಲ್ಲರೂ ನ್ಯಾಯಕ್ಕಾಗಿ ದೇವರ ಮೊರೆ ಹೋಗಿದ್ದಾರೆ. ಸೌಜನ್ಯಾ ಪ್ರಕರಣ ಆರೋಪಿಗಳಿಗೆ ಶಿಕ್ಷೆಯಾಗಬೇಕೆಂದು ದೇವಸ್ಥಾನ ಮತ್ತು ದೈವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಗುತ್ತಿದೆ.
ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಬೇಕೆಂದು ಆಗ್ರಹಿಸಿ ರಾಜ್ಯದಲ್ಲಿ ಪ್ರತಿಭಟನೆಗಳು ನಡೆದಿವೆ.