ಬೆಂಗಳೂರು: ಜಾತ್ಯಾತೀತ ಶಕ್ತಿಗಳಿಂದ ಸಂವಿಧಾನ ಉಳಿಸಲು ಸಭೆ ನಡೆಯುತ್ತಿದೆ. ದೇಶದ ಸಂವಿಧಾನವನ್ನ ಉಳಿಸಲು ಎಲ್ಲರೂ ಒಟ್ಟಾಗಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆಯುವ ಈ ದೇಶದ ಹಿತಾಸಕ್ತಿ ದೃಷ್ಟಿಯಿಂದ ಮಹತ್ವ ಪಡೆದಿದೆ ಎಂದರು. ಹಲವು ರಾಷ್ಟ್ರೀಯ ನಾಯಕರನ್ನು ಸ್ವಾಗತಿಸಲು ಪಕ್ಷ ನನಗೆ ಜವಾಬ್ದಾರಿ ನೀಡಿತ್ತು.ಅ ದರಂತೆ ನಾನು ಹಾಗೂ ಸಚಿವ ಎಂ.ಬಿ.ಪಾಟೀಲ್ ಅವರು ರಾಷ್ಟ್ರೀಯ ನಾಯಕರನ್ನ ಸ್ವಾಗತಿಸಿದ್ದೇವೆ ಎಂದು ಸಚಿವರು ತಿಳಿಸಿದರು. ಸಭೆಯ ಉದ್ದೇಶ, ಅಜೆಂಡಾವನ್ನು ಹಿರಿಯರು ನೋಡ್ತಾರೆ.
ಪಾಟ್ನಾದಲ್ಲಿ ನಡೆದ ಸಭೆಯ ಮುಂದುವರೆದ ಭಾಗವಾಗಿ ಬೆಂಗಳೂರು ನಲ್ಲಿ ಈ ಸಭೆ ನಡೆಯುತ್ತಿದೆ ಎಂದು ತಿಳಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಸಭೆ ಕುರಿತು ಪ್ರತಿಪಕ್ಷಗಳ ಟೀಕೆಗೆ ಅರ್ಥವಿಲ್ಲ ಎಂದರು.
ರಾಜ್ಯ ಸರ್ಕಾರದ ಮೇಲೆ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕುಮಾರಸ್ವಾಮಿ ಎರಡು ಸಲ ಸಿಎಂ ಆದವರು, ಆಡಳಿತದಲ್ಲಿ ಅನುಭವ ಹೊಂದಿರುವವರು, ಸರ್ಕಾರ ಶುರುವಾಗಿ, ೫೦ ದಿನ ಆಗಿಲ್ಲ.ಅಂಬೆ ಕಾಲಿಡ್ತಿದೆ. ಸುಖಾಸುಮ್ಮನೆ ಭ್ರಷ್ಟಚಾರ ಆರೋಪ ಮಾಡುವುದು ಸರಿಯಲ್ಲ. ಕುಮಾರಸ್ವಾಮಿ ಅವರ ಬಳಿ ಸಾಕ್ಷಿ ಆಧಾರ ಇದ್ರೆ ಬಿಡುಗಡೆ ಮಾಡಲಿ ಎಂದರು.