ಬೆಂಗಳೂರು : ಜುಲೈ 1 ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿರುವ ಗೃಹ ಜ್ಯೋತಿ ಯೋಜನೆ ಅನುಷ್ಠಾನ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ಪ್ರತಿ ಕುಟುಂಬಕ್ಕೆ 200 ಯುನಿಟ್ ವಿದ್ಯುತ್ ನೀಡುವ ಎಲ್ಲಾ ಗೊಂದಲಗಳ ಬಗ್ಗೆ ಚರ್ಚೆ ನಡೆಸಲಾಯ್ತು.
ಇನ್ನು ಈ ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಭಾಗಿಯಾದರು.