ಹದಿನೆಂಟು ವರ್ಷ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆ ಮಾಡಲು ಮುಕ್ತರಾಗಿರುತ್ತಾರೆಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ಹೇಳಿಕೆ ಕೊಟ್ಟಿದೆ.
ಮಾಟಮಂತ್ರ, ಕಾಣಿಕೆ, ಹಣದ ಆಮಿಷಯೊಡ್ಡಿ ನಡೆಯುತ್ತಿರುವ ಧಾರ್ಮಿಕ ಮತಾಂತರವನ್ನು ನಿಷೇಧಿಸುವಂತೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಬಿಜೆಪಿ ನಾಯಕ ಹಾಗು ವಕೀಲರಾದ ಅಶ್ವಿನ್ ಕುಮಾರ್ ಉಪಧ್ಯಾಯ ಅವರ ಪರವಾಗಿ ಹಿರಿಯ ವಕೀಲ ಗೋಪಾಲ್ ಶಂಕರ ನಾರಾಯಣ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಇದೊಂದು ಪ್ರಚಾರದ ಅರ್ಜಿಯಾಗಿದೆ, ಯಾಕೆ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ತಮ್ಮಧರ್ಮವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಬಾರದು…? ಧರ್ಮವನ್ನು ಆಯ್ಕೆ ಮಾಡಲು ಅವಕಾಶ ನೀಡದಂತೆ ಮಾಡಲು ಯಾವುದೇ ಕಾರಣವಿಲ್ಲ ಎಂದು ಕೊರ್ಟ್ಹೇಳಿದೆ.

ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್.ಎಫ್ ನಾರೀಮನ್, ಬಿ.ಆರ್ ಗವಾಯಿ ಮತ್ತು ಹೃಷಿಕೇಶ ರಾಯ್ ಅವರನ್ನೊಳಗೊಂಡ ಪೀಠ ಅರ್ಜಿ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.
ಇತ್ತೀಚೆಗೆ ದೇಶದಲ್ಲಿ ಹಲವಾರು ಮತಾಂತರ ಪ್ರಕರಣಗಳು ದಾಖಲಾಗುತ್ತಿವೆ. ಮತಾಂತರ ಆಗುವಂತೆ ಹಣದ ಆಮಿಷ, ಬೆದರಿಕೆಯೊಡ್ಡಲಾಗುತ್ತಿದೆ. ಕೆಲವು ಖಾಸಗಿ ಸಂಸ್ಥೆಗಳು ಬಡವರನ್ನು ಅದರಲ್ಲಿಯೂ ಎಸ್ಸಿ/ಎಸ್ಟಿ ಪಂಗಡದವರನ್ನು ಒಂದು ಸಮುದಾಯದಿಂದ ಇನ್ನೊಂದು ಸಮುದಾಯಕ್ಕೆ ಮತಾಂತರ ಮಾಡಲಾಗುತ್ತಿದೆ. ಸರ್ಕಾರದ ಮೌನವವೇ ಇದಕ್ಕೆ ಕಾರಣ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.





