ಸ್ನೇಹಿತರ ಜತೆ ಸ್ನಾನಕ್ಕೆಂದು ತೆರಳಿ ಕೊಳಕ್ಕೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೇರಳದ ಉಳ್ಳಾಲ ನಡೆದಿರುವುದಾಗಿ ಮಂಗಳವಾರ (ಆಗಸ್ಟ್ 29) ವರದಿಯಾಗಿದೆ.
ಕರ್ನಾಟಕ- ಕೇರಳ ಗಡಿ ಭಾಗದ ಕೆಳಗಿನ ತಲಪಾಡಿ ಬಳಿ ಸಂಭವಿಸಿದೆ. ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ಹರಿಪ್ರಸಾದ್ ಆಚಾರ್ಯ (36) ಮೃತ ಪಟ್ಟವರು.
ತಲಪಾಡಿಯ ನಿಸರ್ಗ ಬಾರ್ ನಲ್ಲಿ ಬೆಳಗ್ಗೆ ಮದ್ಯ ಸೇವಿಸಿದ್ದ ಹರಿಪ್ರಸಾದ್ ಗೆಳೆಯರಾದ ಯುವರಾಜ್ ಯಾನೆ ಮುನ್ನ ಲೋಹಿತ್, ನವೀನ್ ದೇವಾಡಿಗ, ನಿತೇಶ್ ಉಚ್ಚಿಲ್ ಅವರೊಂದಿಗೆ ಸಮೀಪದ ಖಾಸಗಿ ಲೇ ಔಟಿನ ಕೊಳವೊಂದರಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ, ಈಜು ತಿಳಿಯದ ಹರಿಪ್ರಸಾದ್ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.
ಘಟನಾ ಸ್ಥಳಕ್ಕೆ ಮಂಗಳೂರಿನಿಸಿದ ಅಗ್ನಿ ಶಾಮಕ ದಳದವರು ತೆರಳಿ ಕಾರ್ಯಾಚರಣೆ ನಡೆಸಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಮೃತರು ವೆಲ್ಡಿಂಗ್ ವೃತ್ತಿ ನಡೆಸುತ್ತಿದ್ದರು. ಹರಿಪ್ರಸಾದ್ ಆಚಾರ್ಯ ಅವರು ಅವಿವಾಹಿತರಾಗಿದ್ದು, ತಾಯಿ, ಸಹೋದರರು ಹಾಗೂ ಸಹೋದರಿಯರನ್ನು ಅಗಲಿದ್ದಾರೆ.
ಘಟನಾ ಸ್ಥಳಕ್ಕೆ ಮೃತರ ತಮ್ಮ ಅರುಣ್ ಕುಮಾರ್ ಬಂದಿದ್ದು ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.