ಕರ್ನಾಟಕದ ಜನಸಂಖ್ಯೆ ಎರಡು ಪಟ್ಟು ಹೆಚ್ಚಾಗಿದ್ದು, ರಾಜ್ಯದ ಜನತೆ ಅಭಿವೃದ್ಧಿ ಹಿತದೃಷ್ಟಿಯಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೇಳುತ್ತಿರುವೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಮೈಸೂರಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಜನಸಂಖ್ಯೆ ಆಧರಿತವಾಗಿ ರಾಜ್ಯಗಳನ್ನು ವಿಂಗಡಿಸುವ ಬಗ್ಗೆ ಚರ್ಚೆ ನಡೆಯುತ್ತಿರುವುದರಿಂದಲೇ ಪ್ರತ್ಯೇಕ ರಾಜ್ಯದ ಬಗ್ಗೆ ಹೇಳಿದ್ದೇನೆ ಎಂದು ಹೇಳಿದ್ದಾರೆ.
ಕೇಂದ್ರವು 28 ರಾಜ್ಯಗಳನ್ನು 50 ಕ್ಕೇರಿಸುವ ಪ್ರಸ್ತಾಪವಿದೆ. ಹೀಗಾಗಿಯೇ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೇಳುತ್ತಿರುವೆ. ನಾನೂ 9 ಬಾರಿ ಶಾಸಕನಾಗಿದ್ದೇನೆ. ಬಿಜೆಪಿಯಿಂದಲೇ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಹೇಳಿದ್ದಾರೆ.