ಬೆಂಗಳೂರು : ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದು ಜೈಲುಪಾಲಾಗಿರುವ ಪ್ರಶಾಂತ್ ಮಾಡಾಳ್ ತಂದೆ , ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷರಪ್ಪರಿಗೆ ಬಂಧನ ಭೀತಿ ಎದುರಾಗಿದ್ದು ಇನ್ನೂ ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಎ 1 ಆರೋಪಿಯಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಪತ್ತೆ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿಗಳ ನೇತೃತ್ವದಲ್ಲಿ ಮೂರು 15 ಜನರನ್ನೊಳಗೊಂಡ ಮೂರು ವಿಶೇಷ ತಂಡವನ್ನು ರಚಿಸಿದ್ದು ಮಾಡಾಳ್ ವಿರೂಪಾಕ್ಷಪ್ಪ ಪತ್ತೆಗಾಗಿ ಬಲೆ ಬೀಸಿದೆ.
ಪ್ರಶಾಂತ್ ಮಾಡಾಳ್ ಹಾಗೂ ಮಾಡಾಳ್ ವಿರೂಪಾಕ್ಷಪ್ಪ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದು ಐದು ದಿನಗಳೆ ಕಳೆದಿದೆ. ಕೆಎಸ್ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಣ್ಮರೆಯಾಗಿದ್ದಾರೆ. ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದ್ದು ಬಂಧನ ಭೀತಿಯಿಂದ ಈ ಕೆಲಸ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ.
ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕಾಯುತ್ತಿರುವ ಲೋಕಾಯುಕ್ತ ಪೊಲೀಸರು ಇದೇ ಕಾರಣಕ್ಕಾಗಿ ಪ್ರಶಾಂತ್ ಮಾಡಾಳ್ ಸೇರಿದಂತೆ ಐವರನ್ನು ಪೊಲೀಸ್ ಕಸ್ಟಡಿಗೆ ಪಡೆದಿಲ್ಲ. ಒಮ್ಮೆ ಮಾಡಾಳ್ ವಿರೂಪಾಕ್ಷಪ್ಪರನ್ನು ಬಂಧಿಸಿದ ಬಳಿಕ ಉಳಿದ ಐವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಲೆಕ್ಕಾಚಾರದಲ್ಲಿ ಲೋಕಾಯುಕ್ತ ಪೊಲೀಸರಿದ್ದಾರೆ ಎನ್ನಲಾಗಿದೆ.