
ಇಂದು ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ವಿವಿಧ ಸರಕಾರಿ ನೌಕರರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಮನೆಯ ಮೇಲೆ ದಾಳಿಯನ್ನು ನಡೆಸಿ ಪರಿಶೀಲನೆಯನ್ನು ನಡೆಸಿದ್ದಾರೆ ಇನ್ನು ಕೆಲವೇಡೆ ಪರಿಶೀಲನೆ ಮುಂದುವರೆದಿದ್ದು ಹಲವು ದಾಖಲಾತಿಗಳನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂಬ ವರದಿಗಳು ಬರುತ್ತಿವೆ
ಹೀಗೆ ಕೃಷಿ ಇಲಾಖೆ ಅಧಿಕಾರಿಗಳ (Agriculture Department) ಮನೆ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳಿಗೆ ಅಚ್ಚರಿಯೊಂದು ಕಾದಿತ್ತು. ಹೌದು ಲೋಕಾಯುಕ್ತ ಅಧಿಕಾರಿಗಳ ದಾಳಿ ಸಂದರ್ಭದಲ್ಲಿ ಎರಡು ಸಾಕು ಆಮೆಗಳು (Tortoise) ಪತ್ತೆಯಾಗಿವೆ.

ಅಷ್ಟಕ್ಕೂ ಇಂದು ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್ ಹಾಗೂ ಸಹಾಯಕ ನಿರ್ದೇಶಕ ಕೃಷ್ಣಾ ಶಿರೂರು ಎಂಬುವವರ ಮನೆಯ ಮೇಲೂ ಕೂಡ ದಾಳಿ ನಡೆಸಿದ್ರು
ಈ ವೇಳೆ ಸಾಕು ಆಮೆಗಳು ಪತ್ತೆಯಾಗಿದ್ದು ಇದನ್ನು ಹಲವು ಮಂದಿ ನಕ್ಷತ್ರ ಆಮೆಗಳು ಅಂತಲೂ ಹೇಳುತ್ತಿದ್ದಾರೆ ಹೀಗಾಗಿ ಈ ಬಗ್ಗೆ ಇನ್ನೂ ಕೂಡ ಅಧಿಕೃತ ಮಾಹಿತಿಗಳು ಹೊರ ಬಂದಿಲ್ಲ, ಇದನ್ನು ಹೊರತುಪಡಿಸಿದರೆ ಇನ್ನೂ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮುಂದುವರೆದಿದ್ದು ಕೆಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಮಾಹಿತಿಗಳು ಕೂಡ ಬರುತ್ತಿವೆ