ರಾಮನಗರ: ಭೀಕರ ಅಪಘಾತಕ್ಕೆ(Accident) ಇಬ್ಬರು ಇಂಜಿಯರಿಂಗ್ ವಿದ್ಯಾರ್ಥಿಗಳು(Engineering Students) ಬಲಿಯಾಗಿರುವ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ (Bengaluru-Mysuru Expressway) ಬಳಿಯ ರಾಮನಗರ (Ramanagara) ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ.
ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಗೆ (Lorry) ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಪರಿಣಾಮ ಕಾರಿನಲ್ಲಿದ್ದ ವಿಶ್ವ (21) ಮತ್ತು ಸೂರ್ಯ (21) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಚಾಲಕ ಸುಹಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಂಧ್ರ ಮೂಲದ ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾರಣ್ಯಪುರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದರು. ಅವರು ಯಾವುದೋ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೈಸೂರಿಗೆ ಹೋಗಿ ಮರಳಿ ಬರುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.