• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ : ಮಹತ್ವದ ಮಾಹಿತಿ ನೀಡಿದ ಪ್ರಿಯಾಂಕ್‌ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
September 16, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಲಬುರಗಿ:ಕಲ್ಯಾಣ ಕರ್ನಾಟಕ ಉತ್ಸವ (Kalyana Karnataka Festival)ಕಾರ್ಯಕ್ರಮದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ( Chief Minister Siddaramaiah)ಆಗಮಿಸಲಿದ್ದು, ಬೆಳಗ್ಗೆ ಸರ್ದಾರ ವಲಭಭಾಯಿ ಪಟೇಲ್( Sardar Valabhabhai Patel)ಅವರ ಪ್ರತಿಮೆ ಮಾಲಾರ್ಪಣೆ ಮಾಡಿ ನಂತರ ಡಿಎಆರ್ (DAR)ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Minister Priyank Kharge)ಹೇಳಿದರು.

ADVERTISEMENT

ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂಗತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿ ಯಲ್ಲಿ ಸೆ.17ರಂದು ಸಚಿವ ಸಂಪುಟ ಸಭೆ ನಡೆಯಲಿದೆ.ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ದಿಯ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆಯೂ ಕೂಡಾ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು.

ನಮ್ಮ ಭಾಗದ ಎಲ್ಲ ಶಾಸಕರ ಬೇಡಿಕೆಯ ಪಟ್ಟಿ ನೋಡಿದರೆ ರಾಜ್ಯದ ಬಜೆಟ್ ಗಾತ್ರದಷ್ಟಾಗುತ್ತದೆ. ಆದರೆ ಮ್ಯಾಕ್ರೋ ಯೋಜನೆಯಡಿಯಲ್ಲಿ ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಕೊನೆ ಪಕ್ಷ ಈ ಸಲ ಯೋಜನೆಗಳ ಬಗ್ಗೆ ಚರ್ಚಿಸಿದರೆ ಮುಂದಿನ ವರ್ಷವಾದರೂ ಯೋಜನೆ ಬರುತ್ತವೆ ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದ ಸಚಿವರು, ತಮ್ಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.ಈಗಾಗಲೇ ನಮ್ಮ ಇಲಾಖೆಯಲ್ಲಿಯೇ 800 ಇಂಜಿನಿಯರ್ ಗಳ ಹುದ್ದೆ ಭರ್ತಿ ಮಾಡಲಾಗಿದೆ ಎಂದರು.

ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ನಮ್ಮ ಭಾಗದ ರಸ್ತೆಗಳ ರಿಪೇರಿ ಹಾಗೂ ಉನ್ನತಿಕರಣ ಮಾಡಲಾಗುವುದು ಎಂದು ಹೇಳಿದ ಖರ್ಗೆ, ಕಲಬುರಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ.ನಮ್ಮ ಭಾಗದ ಅಭಿವೃದ್ದಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದರು.ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು ಎಂದು ಇದೇ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಮ್ ಖಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags: Dr.Sharanaparakash Rudrappa Patil ministerJagadev GuttedarMazar Alam KhanPraiyanka kharge minister
Previous Post

ಶಾಸಕ ಮುನಿರತ್ನರಿಂದ ನಿಂದನೆಗೊಳಗಾಗಿರುವ ಚಲುವರಾಜು ಕುಟುಂಬಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ

Next Post

ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ :ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post

ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ :ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada