ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಭುದ್ಧ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇದು ಆತ್ಮಹತ್ಯೆ ಅಲ್ಲ ಕೊಲೆ ಅಂತಾ ಆರೋಪಿಸಿದ್ದ ಪ್ರಬುಧ್ದ ತಾಯಿಯ ಹೇಳಿಕೆಯ ಮೇರೆಗೆ 302 ಪ್ರಕರಣ ದಾಖಲಿಸಿಕೊಂಡ ತನಿಖೆಯನ್ನು ಸುಬ್ರಮಣ್ಯಪುರ ಪೊಲೀಸರು ಆರಂಭಿಸಿದ್ದಾರೆ.
ಕಳೆದ ತಿಂಗಳ 15ನೇ ತಾರೀಖು ನಡೆದಿದ್ದ ಪ್ರಬುಧ್ದ ಸಾವು ಪ್ರಕರಣದಲ್ಲಿ, ಬಾತ್ ರೂಮ್ ನಲ್ಲಿ ಶವವಾಗಿ ಪತ್ತೆಯಾಗಿದ್ದ 20 ವರ್ಷದ ಪ್ರಭುಧ್ದ ಕೊನೆಯುಸಿರೆಳೆದಿದ್ದಳು.
ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಅಂತಾ ಪರಿಗಣಿಸಿದ್ದ ಪೊಲೀಸರಿಗೆ ಆಕೆಯ ತಾಯಿ, ತನ್ನ ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.
ನನ್ನ ಮಗಳನ್ನ ಕ್ರೂರವಾಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದ ತಾಯಿಯ ಹೇಳಿಕೆಯನ್ನು ಪರಿಗಣಿಸಲಾಗಿದ್ದು, ಕತ್ತು ಮತ್ತು ಕೈಯನ್ನ ಚಾಕುವಿನಿಂದ ಕುಯ್ದು ಕೊಲೆ ಮಾಡಿದ್ದಾರೆ ಎಂಬ ಹೇಳಿಕೆಯನ್ನು ದೂರಿನಲ್ಲಿ ದಾಖಲಿಸಿಕೊಂಡಿದ್ದಾರೆ.
ಮುಖಕ್ಕೆ ಮತ್ತು ತಲೆಯ ಹಿಂಭಾಗಕ್ಕೆ ಬಲವಾಗಿ ಹೊಡೆಯಲಾಗಿದ್ದು, ನನ್ನ ಮಗಳದ್ದು ಕೊಲೆ ಎಂದು ಪ್ರಕರಣ ದಾಖಲಿಸಿದ ಪ್ರಬುಧ್ದ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕೊಲೆ ಪ್ರಕರಣ ದಾಖಲಿಸಿಕೊಂಡು ಸದ್ಯ ತನಿಖೆ ಮುಂದುವರೆಸಿದ್ದಾರೆ ಪೊಲೀಸರು. ಜೊತೆಗೆ ಅನುಮಾನಸ್ಪದ ವ್ಯಕ್ತಿಗಳನ್ನ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.