ಬೆಂಗಳೂರು; ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಯಿಂದ ಆಯೋಜಿಸಲಾದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿರುವ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಹಾಗೂ ಸುದೇಶ್ ಧನಕರ್ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.
ಉಪರಾಷ್ಟ್ರಪತಿಗಳು ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರು. ಈ ವೇಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್, ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಹಲವರು ಇದ್ದರು.