ಬೆಂಗಳೂರು:ದೇವಸ್ಥಾನಕ್ಕೆ ಬಂದ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿರುವ ಘಟನೆ ಬೆಂಗಳೂರಿನಿಂದ ವರದಿಯಾಗಿದೆ.
ಬೆಂಗಳೂರಿನ ಅಮೃತಹಳ್ಳಿಯ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಘಟನೆ ಜರುಗಿದ್ದು, ಮಹಿಳೆಯ ಜುಟ್ಟು ಹಿಡಿದು ಧರಧರನೆ ಎಳೆದೊಯ್ದು, ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ದೇವರ ದರ್ಶನಕ್ಕೆ ತೆರಳಿದ್ದ ಹೇಮಾವತಿ ಎಂಬ ಮಹಿಳೆಗೆ ಸ್ನಾನ ಮಾಡದೆ, ಶುದ್ಧಿ ಇಲ್ಲದೆ ದೇವಸ್ಥಾನಕ್ಕೆ ಬಂದಿದ್ದೀಯಾ ಎಂದು ಕೂದಲು ಹಿಡಿದು ಹೊರಗೆ ಎಳೆದೊಯ್ದು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.