ಚಿಕ್ಕೋಡಿ: ಮದುವೆಗೆ ಹೆಣ್ಣು ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಹುಕ್ಕೇರಿಯಲ್ಲಿ (Hukkeri) ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶಾಂತಿನಾಥ ಸುರೇಶ್ ಕೇಸ್ತಿ (27) ಎಂದು ಗುರುತಿಸಲಾಗಿದೆ. ಯುವಕ ನಗರದಲ್ಲಿ ಬೈಕ್ ಗ್ಯಾರೇಜ್ ನಡೆಸುತ್ತಿದ್ದ. ಅತಿಯಾದ ಸಾಲ ಹಾಗೂ ಮದುವೆಗೆ ಹೆಣ್ಣು ಸಿಗದ ಹಿನ್ನೆಲೆಯಲ್ಲಿ ನೊಂದಿದ್ದ. ಹೀಗಾಗಿ ಗ್ಯಾರೇಜ್ ನಲ್ಲಿಯೇ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ಈ ಕುರಿತು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.