ಬೆಂಗಳೂರು: ಕೆಲಸ ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಪಿಜಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕಲಬುರಗಿ ಮೂಲದ ಸುಮಾರು 28 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈತ ಕೆಲಸ ಅರಸಿಕೊಂಡು ಬೆಂಗಳೂರಿಗೆ ಬಂದಿದ್ದ. ಆದರೆ, ಈತನಿಗೆ ಎಲ್ಲಿಯೂ ಕೆಲಸ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.