ಚಿಕ್ಕಮಗಳೂರು:ಹೆಬ್ಬೆ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿದ್ದಾರೆ. ಛತ್ತೀಸ್ ಗಢ ಮೂಲದ 30 ವರ್ಷದ ಯುವಕ ಅಮಿತ್ ಕುಮಾರ್ ಸಾವನ್ನಪ್ಪಿದ್ದಾನೆ. ಹೆಬ್ಬೆ ಫಾಲ್ಸ್‌ಗೆ ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಅಮಿತ್ ಕುಮಾರ್ ಭಾನುವಾರ ಸಂಜೆ ವೇಳೆಗೆ ಹೆಬ್ಬೆ ಫಾಲ್ಸ್‌ಗೆ ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ.
ಹೆಬ್ಬೆ ಫಾಲ್ಸ್ ಬಂಡೆ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾನೆ ಯುವಕ ಅಮಿತ್ ಕುಮಾರ್. ಬಂಡೆ ಕಲ್ಲಿನ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಯುವಕ ಅಮಿತ್ ಕುಮಾರ್.ಮೃತ ದೇಹವನ್ನ ತರೀಕೆರೆ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗುತ್ತದೆ.