• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇ-ಖಾತಾ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಲ್ಲ!

ಪ್ರತಿಧ್ವನಿ by ಪ್ರತಿಧ್ವನಿ
December 17, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ರಾಜ್ಯಾದ್ಯಂತ ಆಸ್ತಿ ದಸ್ತಾವೇಜು ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರ ಇ-ಆಸ್ತಿ ಹಾಗೂ ಕಾವೇರಿ-2 ವ್ಯವಸ್ಥೆಯಲ್ಲಿ ಅಗತ್ಯ ಸಿದ್ಧತೆಯಿಲ್ಲದೆ ಇ-ಖಾತಾ ಕಡ್ಡಾಯಗೊಳಿಸಿದ ಪರಿಣಾಮ ರಿಯಲ್ ಎಸ್ಟೇಟ್ಗೆ ಭಾರೀ ಒಡೆತ ಬಿದ್ದಿದೆ.

ADVERTISEMENT

ಅನುಮೋದಿತ ಬಡಾವಣೆಯ ನಕ್ಷೆ ಮಂಜೂರಾತಿ ಪ್ರಕಾರ ಅಭಿವೃದ್ಧಿಪಡಿಸಿದ ಉದ್ಯಾನ, ರಸ್ತೆ ಹಾಗೂ ನಾಗರಿಕ ಸೌಲಭ್ಯಗಳ ನಿವೇಶನಗಳನ್ನು ಮೊದಲು ಸ್ಥಳೀಯ ಸಂಸ್ಥೆಗಳಿಗೆ ಪರಿತ್ಯಜನಾ ಕ್ರಯದ ಮೂಲಕ ನೋಂದಣಿ ಮಾಡಿ ಮಾಲೀಕತ್ವ ಹಕ್ಕು ವರ್ಗಾವಣೆ ಮಾಡಿಕೊಡುವುದು ಕಡ್ಡಾಯ. ಒಂದೊಮ್ಮೆ ನೋಂದಣಿ ಡೀಡ್ ಮಾಡದಿದ್ದರೆ ಸಂಬಂಧಪಟ್ಟ ಬಡಾವಣೆಗಳಲ್ಲಿನ ನಿವೇಶನಗಳ ಮಾರಾಟಕ್ಕೆ ಅವಕಾಶವಿಲ್ಲ.

ಹೀಗಿರುವಾಗ ನೋಂದಣಿ ಡೀಡ್‌ಗೆ ಕಾವೇರಿ-2 ತಂತ್ರಾಂಶದಲ್ಲಿ ಅವಕಾಶವನ್ನೇ ಕಲ್ಪಿಸಿಲ್ಲ. ರಸ್ತೆ, ಉದ್ಯಾನ, ನಾಗರಿಕ ಸೌಲಭ್ಯಗಳ ನಿವೇಶನಗಳಿಗೆ ಇ-ಖಾತಾ ನೀಡುತ್ತಿಲ್ಲ. ಜೊತೆಗೆ, ಕಾವೇರಿ-2 ತಂತ್ರಾಂಶದಲ್ಲೂ ನೋಂದಣಿ ಆಯ್ಕೆ ಇಲ್ಲ. ಇ-ಖಾತಾ ಕಡ್ಡಾಯಗೊಳಿಸಿ ಎರಡೂವರೆ ತಿಂಗಳು ಕಳೆದರೂ ಈವರೆಗೂ ಈ ಆಯ್ಕೆ ನೀಡದಿರುವುದರಿಂದ ಹೊಸ ಬಡಾವಣೆಗಳ ಅಭಿವೃದ್ಧಿ, ಅಭಿವೃದ್ಧಿಗೊಳಿಸಿದ ಬಡಾವಣೆಗಳ ನಿವೇಶನಗಳ ಖರೀದಿ-ಮಾರಾಟಕ್ಕೆ ತೀವ್ರ ಪೆಟ್ಟು ಬಿದ್ದಿದೆ. ಬಿಬಿಎಂಪಿ ಸೇರಿ ರಾಜ್ಯಾದ್ಯಂತ ಖರೀದಿ-ಮಾರಾಟ ವ್ಯವಹಾರಕ್ಕೆ ಪೆಟ್ಟು ಬೀಳುವ ಜೊತೆಗೆ ಹೊಸ ಬಡಾವಣೆಗಳ ಅಭಿವೃದ್ಧಿಗೂ ಅಭಿವೃದ್ಧಿದಾರರು ಹಿಂದಡಿ ಇಡುವಂತಾಗಿದೆ. ಹೀಗಾಗಿ ರಾಜ್ಯಾದ್ಯಂತ ರಿಯಲ್ ಎಸ್ಟೇಟ್ ಕ್ಷೇತ್ರದ ಚಟುವಟಿಕೆಗೆ ಮೊಸುಕು ಕವಿದಂತಾಗಿದೆ, ಸರ್ಕಾರದ ಆದಾಯಕ್ಕೂ ಕೊಕ್ಕೆ ಬಿದ್ದಿದೆ.

ಯಾವುದೇ ಬಡಾವಣೆ ಅಭಿವೃದ್ಧಿಗೊಳ್ಳಬೇಕಾದರೆ ಭೂ-ಬಳಕೆ ಪರಿವರ್ತನೆ, ಸಕ್ಷಮ ಯೋಜನಾ ಪ್ರಾಧಿಕಾರದಿಂದ ಬಡಾವಣೆ ನಕ್ಷೆ ಅನುಮೋದನೆ ಪಡೆಯಬೇಕು. ನಕ್ಷೆ ಮಂಜೂರಾತಿ ಪ್ರಕಾರ ಲೇಔಟ್ ಅಭಿವೃದ್ಧಿಪಡಿಸಿದ ನಂತರ ಅಭಿವೃದ್ಧಿಪಡಿಸಿದ ರಸ್ತೆ, ಉದ್ಯಾನ, ನಾಗರಿಕ ಸೌಲಭ್ಯದ ನಿವೇಶನ, ನೀರು ಸರಬರಾಜು ವ್ಯವಸ್ಥೆಯನ್ನು ಸ್ಥಳೀಯ ಸಂಸ್ಥೆಗಳಿಗೆ ಉಪ ನೋಂದಣಿ ಕಚೇರಿ ಮೂಲಕ ಪರಿತ್ಯಾಜ್ಯ ನೋಂದಣಿ ಮಾಡಿಕೊಡಬೇಕು. ಈ ರೀತಿ ನೋಂದಣಿ ಮಾಡದ ಹೊರತು ಸಂಬಂಧಪಟ್ಟ ಬಡಾವಣೆಯಲ್ಲಿ ನಿವೇಶನಗಳ ಮಾರಾಟಕ್ಕೆ ಸ್ಥಳೀಯ ಸಂಸ್ಥೆಗಳು ಅಗತ್ಯ ಅನುಮತಿ ನೀಡುವುದಿಲ್ಲ.

ಇನ್ನು ಭೂ ಬಳಕೆ ಪರಿವರ್ತನೆ ಆಗಿ ನಕ್ಷೆ ಮಂಜೂರಾತಿ ಪ್ರಕಾರ ಅಭಿವೃದ್ಧಿಗೊಳ್ಳದ ಜಮೀನನ್ನು ಒಟ್ಟಾಗಿ ಮಾರಾಟ ಮಾಡಲು ಸಹ ಅವಕಾಶವಿಲ್ಲದಂತಾಗಿದೆ. ಹೀಗಾಗಿ ಬಡಾವಣೆ ಅಭಿವೃದ್ಧಿದಾರರು ಬಡಾವಣೆ ನಿರ್ಮಿಸಲು ಅಗತ್ಯ ಜಮೀನು ಖರೀದಿಸಲು ಸಹ ಸಮಸ್ಯೆಯಾಗಿದೆ ಎಂದು ತಿಳಿದುಬಂದಿದೆ. ಆದರೆ, ಬಿಬಿಎಂಪಿ ಹಾಗೂ ಗ್ರಾಪಂಗಳ ವ್ಯಾಪ್ತಿಯಲ್ಲಿ ಪರಿಹಾರ ಕಲ್ಪಿಸಲು ಇನ್ನೂ ಸಾಧ್ಯವಾಗಿಲ್ಲ.

ಇ-ಖಾತಾ ಕಡ್ಡಾಯ ಎಂಬುದು ನೋಂದಣಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವಲ್ಲಿ ಕ್ರಾಂತಿಕಾರಕ ಹೆಜ್ಜೆ. ಆದರೆ, ಕಂದಾಯ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಳ್ಳದೆ ಇ-ಖಾತಾ ಕಡ್ಡಾಯ ಮಾಡಿದೆ. ಇದರಿಂದ ರಿಯಲ್ ಎಸ್ಟೇಟ್ ಚಟುವಟಿಕೆಗೆ ಸಮಸ್ಯೆಯಾಗಿರುವುದು ಸತ್ಯ. ಈ ಸಮಸ್ಯೆ ಬಗೆಹರಿಸಲು ಪೌರಾಡಳಿತ ನಿರ್ದೇಶನಾಲಯ ಆದೇಶ ಹೊರಡಿಸಿದ್ದು, ಪೌರಾಡಳಿತ ನಿರ್ದೇಶನಾಲಯ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಇ-ಆಸ್ತಿ ತಂತ್ರಾಂಶದಲ್ಲಿ ಆಯ್ಕೆ ಕಲ್ಪಿಸಲು ಆದೇಶಿಸಲಾಗಿದೆ.

Tags: BBMPBJPCongress PartyE khataKaveri Web Sitereal estateSubregistarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಂಜು – ರಜತ್ ನಡುವೆ ಬಿಗ್ ಫೈಟ್ – ಯಾರದ್ದು ತಪ್ಪು?

Next Post

ಆರ್‌ ಎಸ್‌ ಎಸ್‌ ಬಳಿ ಇರುವ ಸರ್ಕಾರಿ ಜಮೀನುಗಳ ಬಗ್ಗೆ ಯಾಕೆ ಚರ್ಚೆ ಇಲ್ಲ..!!

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

ಆರ್‌ ಎಸ್‌ ಎಸ್‌ ಬಳಿ ಇರುವ ಸರ್ಕಾರಿ ಜಮೀನುಗಳ ಬಗ್ಗೆ ಯಾಕೆ ಚರ್ಚೆ ಇಲ್ಲ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada