ಇನ್ಮುಂದೆ ಮತದಾರರ ಪಟ್ಟಿ (Voters list) ಪರಿಷ್ಕರಣೆಗಾಗಿ ಮತದಾರರ ಆಧಾರ್ ಕಾರ್ಡ್ (Adhar card), ಮತದಾರರ ಗುರುತಿನ (Voter I’d ) ಚೀಟಿ ಮತ್ತು ಪಡಿತರ ಚೀಟಿಗಳನ್ನು (Ration card) ದಾಖಲೆಗಳಾಗಿ ಸ್ವೀಕರಿಸುವುದನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ನಿನ್ನೆ(ಜುಲೈ 10) ಚುನಾವಣಾ ಆಯೋಗಕ್ಕೆ ಮಹತ್ವದ ಆದೇಶ ನೀಡಿದೆ.

ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದಾಗ, ಆಧಾರ್ ಕಾರ್ಡ್ ಪೌರತ್ವದ ಪುರಾವೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಆದ್ರೆ ಈ ವಾದವನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್, ಮತದಾರರ ಆಧಾರ್ ಕಾರ್ಡ್, ವೋಟರ್ ಐಡಿ ಅಥವಾ ಪಡಿತರ ಚೀಟಿಯನ್ನು ಗುರುತಿನ ಚೀಟಿಯಾಗಿ ಪರಿಗಣಿಸಿ ಪರಿಷ್ಕರಣೆ ಮಾಡಬೇಕು ಎಂದು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.











