• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಖಾಸಗಿ ಟ್ರಸ್ಟ್‌ಗೆ ಕೆಎಸ್‌ಆರ್‌ಟಿಸಿ ಆಸ್ಪತ್ರೆ: ತೇಜಸ್ವಿ ಸೂರ್ಯ ವಿರುದ್ಧ ಆಮ್‌ ಆದ್ಮಿ ಪಾರ್ಟಿ ಕಿಡಿ

Any Mind by Any Mind
September 18, 2022
in ಕರ್ನಾಟಕ
0
ಖಾಸಗಿ ಟ್ರಸ್ಟ್‌ಗೆ ಕೆಎಸ್‌ಆರ್‌ಟಿಸಿ ಆಸ್ಪತ್ರೆ: ತೇಜಸ್ವಿ ಸೂರ್ಯ ವಿರುದ್ಧ ಆಮ್‌ ಆದ್ಮಿ ಪಾರ್ಟಿ ಕಿಡಿ
Share on WhatsAppShare on FacebookShare on Telegram

ಬೆಂಗಳೂರಿನ ಜಯನಗರದಲ್ಲಿರುವ ಕೆಎಸ್‌ಆರ್‌ಟಿಸಿ ಆಸ್ಪತ್ರೆಯನ್ನು ಖಾಸಗಿ ಟ್ರಸ್ಟ್‌ಗೆ ನೀಡುವ ಸಂಸದ ತೇಜಸ್ವಿ ಸೂರ್ಯ ನಿರ್ಧಾರಕ್ಕೆ ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ತೀವ್ರ ವಿರೋಧ ವ್ಯಕ್ತಪಡಿಸಿದರು.

ADVERTISEMENT

ಮಾಧ್ಯಮಗಳಿಗೆ ಹೇಳಿಕೆ ನೀಡಿದ ಮೋಹನ್‌ ದಾಸರಿ, “ಕೆಎಸ್‌ಆರ್‌ಟಿಸಿ ಕೇಂದ್ರ ವಿಭಾಗದ ಮುಖ್ಯ ಟ್ರಾಫಿಕ್‌ ಮ್ಯಾನೇಜರ್‌ರವರು ಆಸ್ಪತ್ರೆಯನ್ನು ಖಾಸಗಿಯವರಿಗೆ ನೀಡಲು 25.07.2022ರಂದು ಟೆಂಡರ್‌ಗೆ ಆಹ್ವಾನ ಪ್ರಕಟಿಸಿದ್ದಾರೆ. ಆದರೆ ಆಹ್ವಾನದ ಜಾಹೀರಾತಿನಲ್ಲಿರುವ ಹಲವು ಅಂಶಗಳು ಅನುಮಾನಾಸ್ಪದವಾಗಿವೆ. ಚಾರಿಟಿ ಚಟುವಟಿಕೆಗಳಲ್ಲಿ ಕನಿಷ್ಠ 25 ವರ್ಷಗಳ ಅನುಭವ ಇರುವವರು ಹಾಗೂ ಚಾರಿಟಿ ಆಸ್ಪತ್ರೆಯನ್ನು ನಿಭಾಯಿಸಿದವರು ಮಾತ್ರ ಟೆಂಡರ್‌ನಲ್ಲಿ ಭಾಗವಹಿಸಲು ಯೋಗ್ಯರು ಎಂದು ಹೇಳಲಾಗಿದೆ. ಇವುಗಳನ್ನು ಗಮನಿಸಿದರೆ, ಒಂದು ನಿರ್ದಿಷ್ಟ ಟ್ರಸ್ಟ್‌ಗೆ ಟೆಂಡರ್‌ ನೀಡಲೆಂದೇ ನಾಟಕೀಯವಾಗಿ ನಿಯಮಗಳನ್ನು ರೂಪಿಸಿರುವುದು ಸ್ಪಷ್ಟವಾಗುತ್ತದೆ” ಎಂದು ಹೇಳಿದರು.

“ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಆಸ್ಪತ್ರೆಗೆ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದು ಟೆಂಡರ್‌ ಆಹ್ವಾನದಲ್ಲಿ ಹೇಳಲಾಗಿದೆ. ಆಸ್ಪತ್ರೆಯ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯಗೆ ಮೂಗು ತೂರಿಸಲು ಅವಕಾಶ ನೀಡಿ, ಅವರ ಆಪ್ತರಿಗೆ ಟೆಂಡರ್‌ ನೀಡಲೆಂದೇ ಎಂಪಿಎಲ್‌ಎಡಿ ನಿಧಿಯನ್ನು ಬಳಸಿಕೊಳ್ಳಲಾಗುತ್ತಿದೆ. 1951ರಲ್ಲಿ ಆರಂಭವಾದ ಶ್ರೀ ವಾಸವಿ ಟ್ರಸ್ಟ್‌ ಎಂಬ ಖಾಸಗಿ ಕುಟುಂಬ ಟ್ರಸ್ಟ್‌ಗೆ ಆಸ್ಪತ್ರೆಯ ಟೆಂಡರ್‌ ನೀಡಲು ತೇಜಸ್ವಿ ಸೂರ್ಯ ಉತ್ಸುಕರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆಗ, ಸರ್ಕಾರಿ ಆಸ್ಪತ್ರೆಯನ್ನು ಟ್ರಸ್ಟ್‌ಗೆ ನೀಡುವುದಕ್ಕೆ ಅಲ್ಲಿನ ಸಿಬ್ಬಂದಿ ವಿರೋಧ ವ್ಯಕ್ತಪಡಿಸಿದರೂ ತೇಜಸ್ವಿ ಸೂರ್ಯ ಮಾತ್ರ ಇದರಿಂದ ಹಿಂದೆ ಸರಿದಿಲ್ಲ” ಎಂದು ಮೋಹನ್‌ ದಾಸರಿ ಹೇಳಿದರು.

“ಕೆಎಸ್‌ಆರ್‌ಟಿಸಿ ಸಿಬ್ಬಂದಿ ಹಾಗೂ ನೌಕರರ ಒಕ್ಕೂಟವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸೆಪ್ಟೆಂಬರ್‌ 16ರಂದು ಪತ್ರ ಬರೆದಿದ್ದು, ಈ ಕುರಿತು ಮಧ್ಯ ಪ್ರವೇಶಿಸಿ ಆಸ್ಪತ್ರೆಯು ಖಾಸಗಿಯವರ ಪಾಲಾಗುವುದನ್ನು ತಡೆಯಬೇಕೆಂದು ಮನವಿ ಮಾಡಿದ್ದಾರೆ. ಸಿಎಂ ಬೊಮ್ಮಾಯಿಯವರು ಇದನ್ನು ಗಂಭೀರವಾಗಿ ಪರಿಗಣಿಸಿ, ಆಸ್ಪತ್ರೆಯು ಖಾಸಗಿಯವರ ಪಾಲಾಗುವುದನ್ನು ತಪ್ಪಿಸಬೇಕು. ಆಸ್ಪತ್ರೆಯ ಸಿಬ್ಬಂದಿ ಹಾಗೂ ಕೆಎಸ್‌ಆರ್‌ಟಿಸಿ ನೌಕರರ ಜೊತೆ ಮಾತುಕತೆ ನಡೆಸಿ ಆಸ್ಪತ್ರೆಯನ್ನು ಆಧುನೀಕರಣಗೊಳಿಸಲು ಕ್ರಮ ಕೈಗೊಳ್ಳಬೇಕು” ಎಂದು ಮೋಹನ್‌ ದಾಸರಿ ತಮ್ಮ ಟ್ವೀಟ್ ನಲ್ಲಿ ಆಗ್ರಹಿಸಿದ್ದಾರೆ .

Previous Post

ಕೆಪಿಸಿಸಿ ಓಬಿಸಿ ಘಟಕದ ಅಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

Next Post

ಬೆಂಗಳೂರಿನಲ್ಲಿ 46 ಕೆರೆ ಒತ್ತುವರಿ ಮಾಡಿ ಪ್ರವಾಹಕ್ಕೆ ಕಾರಣವಾಯ್ತಾ BDA?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು.. ಅಸಲಿಗೆ ಪಕ್ಕಾ ಲೆಕ್ಕ ಏನು?

ಬೆಂಗಳೂರಿನಲ್ಲಿ 46 ಕೆರೆ ಒತ್ತುವರಿ ಮಾಡಿ ಪ್ರವಾಹಕ್ಕೆ ಕಾರಣವಾಯ್ತಾ BDA?

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada