ರಾಜಾಜಿನಗರದ ಲೂಲು ಮಾಲ್ ಎದುರಿನಲ್ಲೇ ಉಮಾ ಎಂಬ ಮಹಿಳೆಯ ರಸ್ತೆ ಗುಂಡಿಯ ಕಾರಣದಿಂದ ಮಾರಣಾಂತಿಕ ಅಪಘಾತಕ್ಕೀಡಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಅಪಘಾತ ನಡೆದ ಸ್ಥಳದಲ್ಲೇ ಪ್ರತಿಭಟನೆ ಮಾಡುವ ಮೂಲಕ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ದ ಕಿಡಿಕಾರಿದ್ದಾರೆ.
ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಸ್ಥಳೀಯ ಶಾಸಕ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಕೂಡಲೇ ತಪ್ಪಿತಸ್ಥ ಅಧಿಕಾರಿಗಳನ್ನು ಬಂಧಿಸಿ ಉಗ್ರ ಕ್ರಮ ತೆಗೆದುಕೊಳ್ಳಬೇಕೆಂದ ಆಗ್ರಹಿಸಿದರು. ರಸ್ತೆ ತಡೆದು ಪ್ರತಿಭಟಿಸಲು ಮುಂದಾದಾಗ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಕೂಡಲೇ ಅಧಿಕಾರಿಗಳುಹಾಗೂ ಜನಪ್ರತಿನಿಧಿ ಗಳು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿ ರಸ್ತೆಯಲ್ಲಿ ಉರುಳು ಸೇವೆಯನ್ನು ಮಾಡಿ, ಬೈಕ್ ಪ್ರತಿಕೃತಿಯನ್ನಿಟ್ಟು ಪ್ರತಿಭಟಿಸಿದರು.