ಗೋವಾದಲ್ಲಿ ಕಾಂಗ್ರೆಸ್ ತನ್ನ ಶಾಸಕ ಅಭ್ಯರ್ಥಿಗಳನ್ನು ರೆಸಾರ್ಟ್ಗೆ ಸ್ಥಳಾಂತರಿಸಿದ ಒಂದು ದಿನದ ನಂತರ, ಆಮ್ ಆದ್ಮಿ ಪಕ್ಷವು ತನ್ನ ಅಭ್ಯರ್ಥಿಗಳನ್ನು ಕಾವಲು ಕಾಯಲು ಮುಂದಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಎಎಪಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಗೋವಾ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕಾಂಗ್ರೆಸ್ನ ನೇರ ಹಣಾಹಣಿ ಹೋರಾಟದ ನಡೆಯಲಿದೆ ಎಂಬ ಮುನ್ಸೂಚನೆಯನ್ನು ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುತಿದ್ದಂತೆ ಎಎಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಾವಲು ಕಾಯಲು ಮುಂದಾಗಿದ್ದಾರೆ. 2017 ರ ಆದ ರಾಜಕೀಯ ಬೆಳವಣಿಗೆ ಪುನರಾವರ್ತನೆಯನ್ನು ತಪ್ಪಿಸಲು ತಮ್ಮ ಅಭ್ಯರ್ಥಿಗಳನ್ನು ಸುರಕ್ಷಿತವಾಗಿ ಕಾವಲು ಕಾಯಲು ಎರಡು ಪಕ್ಷಗಳು ಮುಂದಾಗಿದೆ.
ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಉತ್ತರ ಗೋವಾದ ರೆಸಾರ್ಟ್ಗೆ ಸ್ಥಳಾಂತರಿಸಿದೆ ಎಂದು ವರದಿಯಾಗಿದೆ, ಗುರುವಾರದ ಮತ ಎಣಿಕೆ ಮುಗಿದು ಫಲಿತಾಂಶ ಹೊರಬೀಳುವವರೆಗೆ ಅಲ್ಲಿಯೇ ಇರುತ್ತಾರೆ ಎಂದು ತಿಳಿದು ಬಂದಿದೆ.
ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ಗೆ ಮೂರು ಸ್ಥಾನಗಳನ್ನು ಗೆಲ್ಲಲಿದೆ ಎಂದು ಎಕ್ಸಿಟ್ ಪೋಲ್ಗಳು ಭವಿಷ್ಯ ನುಡಿದಿವೆ.

ಆಮ್ ಆದ್ಮಿ ಪಕ್ಷವು ಯಾವುದೇ ಸ್ಥಾನ ಗೆಲ್ಲುವುದಿಲ್ಲ ಎಂದು ಎಕ್ಸಿಟ್ ಪೋಲ್ಗಳು ಹೇಳಿವೆ ಆದರೆ ಕಳೆದ ಬಾರಿಯ ಫಲಿತಾಂಶವನ್ನು ಗಮನಿಸಿದರೆ ಕಾಂಗ್ರೆಸ್ ಯಾವುದೇ ಅವಕಾಶಗಳನ್ನುಬಿಟ್ಟುಕೊಡಲು ಸಿದ್ದವಿಲ್ಲ.
ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಮುನ್ನ ಗೋವಾದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ನಿನ್ನೆ ಎನ್ಡಿಟಿವಿಗೆ ತಮ್ಮ ಪಕ್ಷವು “ಅಭ್ಯರ್ಥಿಗಳನ್ನು ಕದಿಯುವವರ” ವಿರುದ್ಧ ಕಾವಲು ಕಾಯುತ್ತಿದೆ ಎಂದು ಹೇಳಿದ್ದರು.
2017 ರ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿ, ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಕಾಂಗ್ರೆಸ್ ಗೋವಾದಲ್ಲಿ ಸರ್ಕಾರ ರಚಿಸಲು ವಿಫಲವಾಗಿತ್ತು ಆದರೆ ಈಸಲ ಆ ತಪ್ಪು ಮರುಕಳಿಸದಂತೆ ನೋಡಿಕೊಳ್ಳವ ಜವಾಬ್ದಾರಿಯನ್ನು ಕಾಂಗ್ರೆಸ್ ನೋಡಿಕೊಳ್ಳುತ್ತಿದೆ.





