• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡ್ಯ; ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಎಎಪಿ

Any Mind by Any Mind
November 15, 2022
in ಕರ್ನಾಟಕ, ರಾಜಕೀಯ
0
ಮಂಡ್ಯ; ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಎಎಪಿ
Share on WhatsAppShare on FacebookShare on Telegram

ಪ್ರತಿ ಟನ್‌ ಕಬ್ಬಿಗೆ 4,500 ರೂಪಾಯಿ ಎಫ್‌ಆರ್‌ಪಿ ನಿಗದಿ ಪಡಿಸಬೇಕು ಹಾಗೂ ಲೀಟರ್‌ ಹಾಲಿಗೆ 40 ರೂಪಾಯಿ ಕನಿಷ್ಠ ಬೆಲೆ ನೀಡಬೇಕೆಂದು ಆಗ್ರಹಿಸಿ ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಭಾಗವಹಿಸಿ, ಬೆಂಬಲ ಸೂಚಿಸಿದ್ದಾರೆ.

ADVERTISEMENT

ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿ, ಕಳೆದ 16 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಸ್ಪಂದಿಸದಿರುವುದು ಅತ್ಯಂತ ಬೇಸರ ಸರ್ಕಾರ. ಈ 40% ಸರ್ಕಾರಕ್ಕೆ ಭ್ರಷ್ಟಾಚಾರ ಮಾಡುವುದೊಂದೇ ಗುರಿಯಾಗಿದ್ದು, ರೈತರ ಹಿತ ಮುಖ್ಯವಾಗಿಲ್ಲ. ಪಂಜಾಬ್‌ನ ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಕಬ್ಬಿನ ಎಫ್‌ಆರ್‌ಪಿಯನ್ನು 3,800 ರೂಪಾಯಿಗೆ ಏರಿಕೆ ಮಾಡಿದೆ. ಕರ್ನಾಟಕ ಸರ್ಕಾರ ಕೂಡ ಎಫ್‌ಆರ್‌ಪಿ ಪರಿಷ್ಕರಣೆ ಮಾಡಿ ರೈತರಿಗೆ ನೆರವಾಗಬೇಕು ಎಂದು ಆಗ್ರಹಿಸಿದ್ದಾರೆ.

ಇಲ್ಲಿನ ಬಹುತೇಕ ಸಕ್ಕರೆ ಕಾರ್ಖಾನೆಗಳ ಮಾಲೀಕತ್ವವು ಶಾಸಕರುಗಳು ಹಾಗೂ ಸಚಿವರುಗಳಿಗೆ ಸೇರಿವೆ. ಹಾಗಾಗಿ ರೈತರ ಮೇಲೆ ನಿರಂತರವಾಗಿ ದೌರ್ಜನ್ಯ ಮಾಡುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ರೈತರ ಭಾವನೆಗಳಿಗೆ ಬೆಲೆ ಬರಬೇಕಾದರೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸರ್ಕಾರದ ಬದಲು ರೈತರ ಹಿತ ಬಯಸುವವರ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಮಾತನಾಡುವ ವೇಳೆ ಹೇಳಿದ್ದಾರೆ.

ಮೃತ ಯೋಧನ ಮನೆಗೆ ಭೇಟಿ

ಮಂಡ್ಯ ತಾಲೂಕಿನ ಕಾರೆಮನೆ ಗೇಟ್‌ ಬಳಿ ರಸ್ತೆಗುಂಡಿ ತಪ್ಪಿಸಲು ಹೋಗಿ ಅಪಘಾತಗೊಂಡು ಮೃತಪಟ್ಟ ಸಾತನೂರು ಗ್ರಾಮದ ಬೀರೇಶ್ವರ ಬಡಾವಣೆಯ ನಿವೃತ್ತ ಯೋಧ ಎಸ್‌.ಎನ್‌.ಕುಮಾರ್‌ ಮನೆಗೆ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದ ನಿಯೋಗ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆ.

ರಸ್ತೆಗುಂಡಿಯು ಕೇವಲ ಬೆಂಗಳೂರಿನ ಸಮಸ್ಯೆಯಲ್ಲ, ಇದು ಇಡೀ ರಾಜ್ಯದ ಸಮಸ್ಯೆ. ಭ್ರಷ್ಟ ಬಿಜೆಪಿ ಸರ್ಕಾರದ ಲೂಟಿಕೋರರ ಜನಪ್ರತಿನಿಧಿಗಳಿಂದಾಗಿ ರಾಜ್ಯಾದ್ಯಂತ ರಸ್ತೆಗಳು ಗುಂಡಿಮಯವಾಗಿವೆ. ಮುಂದಿನ ಚುನಾವಣೆಯಲ್ಲಿ ಪ್ರಾಮಾಣಿಕ ಪಕ್ಷವನ್ನು ಗೆಲ್ಲಿಸುವುದೊಂದೇ ಇದಕ್ಕಿರುವ ಪರಿಹಾರ. ಮುಖ್ಯಮಂತ್ರಿಯವರಿಗೆ ಮಾಜಿ ಯೋಧರ ಬಗ್ಗೆ ಕಾಳಜಿಯಿದ್ದರೆ ಇಲ್ಲಿಗೆ ಬಂದು ಸೂಕ್ತ ಪರಿಹಾರ ನೀಡಲಿ ಎಂದು ನಿಯೋಗ ಆಗ್ರಹಿಸಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಕ್ಕುಪತ್ರ ಕೊಡುವ ಕೆಲಸದಲ್ಲಿ ನಾವು ಸಗಣಿ ತಿನ್ನುವುದಿಲ್ಲ : ಮಧು ಬಂಗಾರಪ್ಪ

Next Post

ಪ್ರತಾಪ್ ಸಿಂಹ ಶತ್ರು ಮನೆ ಗೆ ಬಂದ್ರು ದೇವಭವೋ ಅನಬೇಕು.. ಸಿ ಎಂ ಇಬ್ರಾಹಿಂ

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ಪ್ರತಾಪ್ ಸಿಂಹ ಶತ್ರು ಮನೆ ಗೆ ಬಂದ್ರು ದೇವಭವೋ ಅನಬೇಕು.. ಸಿ ಎಂ ಇಬ್ರಾಹಿಂ

ಪ್ರತಾಪ್ ಸಿಂಹ ಶತ್ರು ಮನೆ ಗೆ ಬಂದ್ರು ದೇವಭವೋ ಅನಬೇಕು.. ಸಿ ಎಂ ಇಬ್ರಾಹಿಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada