• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಸಕ ಮುನಿರತ್ನ‌ ರಾಜೀನಾಮೆಗೆ ಆಗ್ರಹಿಸಿ ಎಎಪಿ‌ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
September 16, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಜಾತಿನಿಂದನೆ( Caste abuse)ಮತ್ತು ಬಿಬಿಎಂಪಿಯ (BBMP)ಘನತ್ಯಾಜ್ಯ ವಿಲೇವಾರಿ ಗುತ್ತಿಗೆದಾರರಿಂದ (contractor) ಲಂಚಕ್ಕೆ (bribe)ಬೇಡಿಕೆ ಇಟ್ಟ ಆರೋಪದಡಿ ಬಂಧಿಸಲಾಗಿರುವ ಬಿಜೆಪಿ ಶಾಸಕ ಮುನಿರತ್ನ( BJP MLA Muniratna)ಅವರನ್ನು ಆ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ (Aam Aadmi Party)ಬೆಂಗಳೂರು ನಗರ ಘಟಕದ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.ಮಹಿಳಾ, ದಲಿತ ವಿರೋಧಿ ಶಾಸಕನನ್ನು ಕಿತ್ತೊಗೆಯಿರಿ, ಮುನಿರತ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಫಲಕಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿದರು.

ADVERTISEMENT

ಈ ವೇಳೆ ಮಾತನಾಡಿದ ಪಕ್ಷದ ರಾಜ್ಯ ಸಂಘಟನಾ(State organization of the party)ಕಾರ್ಯದರ್ಶಿಗಳಾದ ಮೋಹನ್ ದಾಸರಿ ಅವರು, ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಬಿಜೆಪಿ ನಾಯಕರಿಗೆ ಇದೆಯೇ? ದಲಿತ ಸಮುದಾಯದವರ ಬಳಿ ಬಿಜೆಪಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರದಬ್ಬಬೇಕು ಎಂದು ಒತ್ತಾಯಿಸಿದರು.

ಘನತ್ಯಾಜ್ಯ ವಿಲೇವಾರಿ ಗುತ್ತಿಗೆಗೆ ಸಂಬಂಧಿಸಿದಂತೆ ಮುನಿರತ್ನ ಹಾಗೂ ಅವರ ಆಪ್ತ ವಸಂತ ಕುಮಾರ್ ಅವರು ₹30 ಲಕ್ಷಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದಾರೆ. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರು ದೂರು ನೀಡಿದ್ದಾರೆ.ಜಾತಿ ನಿಂದನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಆಡಿಯೊದಲ್ಲಿನ ಮುನಿರತ್ನ ಅವರ ಮಾತುಗಳು ಕೇವಲ ಅವರೊಬ್ಬರ ವೈಯಕ್ತಿಕ ಹೇಳಿಕೆಯಲ್ಲ, ಸಮಸ್ತ ಬಿಜೆಪಿಗರ ಮನಸ್ಥಿತಿಯ ಪ್ರತಿರೂಪ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.

ವಾಸ್ತವದಲ್ಲಿ ದಲಿತರನ್ನು, ಮಹಿಳೆಯರನ್ನು ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದಕ್ಕೆ ಮುನಿರತ್ನ ಅವರು ಆಡಿರುವ ಮಾತುಗಳೇ ಸಾಕ್ಷಿ. ಗುತ್ತಿಗೆದಾರರೊಬ್ಬರಿಗೆ ಕಮಿಷನ್‌ ಕಿರುಕುಳ ನೀಡುತ್ತ, ಅವಾಚ್ಯವಾಗಿ ಅವರ ತಾಯಿಯನ್ನು ನಿಂದಿಸುತ್ತ ಕೊಲೆ ಬೆದರಿಕೆ ಒಡ್ಡಿರುವುದು ಆಘಾತಕಾರಿ ವಿಚಾರ.ಇಂತಹ ಜನಪ್ರತಿನಿಧಿಗಳಿದ್ದರೆ ಗುತ್ತಿಗೆದಾರರು, ಜನಸಾಮಾನ್ಯರು ನೆಮ್ಮದಿಯಿಂದ ಬದುಕಲು ಸಾಧ್ಯವೇ? ಎಂದು‌ ಪ್ರಶ್ನಿಸಿದರು.

ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಡಾ. ಸತೀಶ್, ವೈರಲ್‌( President Dr.Satish,)ಆಗಿರುವ ಆಡಿಯೋದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸೋ ಇಚ್ಛೆ ನಿಂದಿಸಿದ್ದಾರೆ, ಗುತ್ತಿಗೆದಾರನಿಂದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ, ಕೊನೆಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.ಇಂಥ ಭ್ರಷ್ಟ ಶಾಸಕನನ್ನು ‌ಬಿಜೆಪಿಯು ಪಕ್ಷದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಆಪ್ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಸರ್ರಾವ್ ಮಾತನಾಡುತ್ತಾ, ತಾಯಿಯ ಬಗ್ಗೆ ಹೇಯವಾಗಿ ಮಾತನಾಡಿರುವ ಮುನಿರತ್ನ ಜನಪ್ರತಿನಿಧಿಯಾಗಿ ಮುಂದುವರಿಯಲು ಅನರ್ಹರು.ಬಿಜೆಪಿಯು ಮುನಿರತ್ನ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು. ಮುನಿರತ್ನ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.ಪಕ್ಷದ ಎಸ್ಸಿಎಸ್ಟಿ ವಿಭಾಗದ ಅಧ್ಯಕ್ಷ ಸಿದ್ದು, ಮುಖಂಡರಾದ ಜಗದೀಶ ಬಾಬು, ಲೋಕೇಶ್, ಶಶಿಧರ್ ಆರಾಧ್ಯ, ಅನಿಲ್ ನಾಚಪ್ಪ, ಅನಿತಾ, ಶರಣ್ಯ, ಕಲೈ, ಮುನೀಂದ್ರ, ಶರವಣ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tags: aap chandruAnil NachappaAnitaBJP MLA Muniratnadivision president SidduJagadish BabuKalailokeshMunindraSaravanSashidhar AradhyaSharanya
Previous Post

ಡ್ಯಾನ್ಸ್ ಕೋರಿಯೋಗ್ರಾಫರ್ ಮೇಲೆ ಬಲಾತ್ಕಾರ ಕೇಸ್..!

Next Post

ಖ್ಯಾತ ಕೋರಿಯಾಗ್ರಫರ್ ಜಾನಿ ಮಾಸ್ಟರ್ ವಿರುದ್ಧ ರೇಪ್ ಕೇಸ್ ದಾಖಲು ! 

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಖ್ಯಾತ ಕೋರಿಯಾಗ್ರಫರ್ ಜಾನಿ ಮಾಸ್ಟರ್ ವಿರುದ್ಧ ರೇಪ್ ಕೇಸ್ ದಾಖಲು ! 

ಖ್ಯಾತ ಕೋರಿಯಾಗ್ರಫರ್ ಜಾನಿ ಮಾಸ್ಟರ್ ವಿರುದ್ಧ ರೇಪ್ ಕೇಸ್ ದಾಖಲು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada