ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಮ್ಮರದ ಅಭ್ಯರ್ಥಿ ಯಶ್ವಂತ್ ಸಿನ್ಹಾರನ್ನು ಬೆಂಬಲಿಸುವುದಾಗಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ತಿಳಿಸಿದೆ.
ಶನಿವಾರ ಪಕ್ಷದ ರಾಜಕೀಯ ಸಲಹಾ ಸಮಿತಿ ಸಭೆ(PAC) ಸಭೆ ಬಳಿಕ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ತಿಳಿಸಿದ್ದಾರೆ.

ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್, ರಾಘವ್ ಚಡ್ಡಾ, ಶಾಸಕ ಅತಿಶಿ ಸೇರಿದಂತೆ ಅನೇಕರು ಸಭೆಯಲ್ಲಿ ಭಾಗಿಯಾಗಿದ್ದರು.
ಬಿಜೆಪಿ ಹಾಗೂ ಕಾಂಗ್ರೆಸ್ಸೇತರ ಪಕ್ಷವಾಗಿ ಎಎಪಿ ದೆಹಲಿ ಹಾಗೂ ಪಂಜಾಬ್ನಲ್ಲಿ ಸರ್ಕಾರ ರಚಿಸಿದೆ. ಒಟ್ಟು 156 ಶಾಸಕರು ಹಾಗೂ 10 ಮಂದಿ ರಾಜ್ಯಸಭಾ ಸದಸ್ಯರಿದ್ದಾರೆ.