ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್‌ನಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ರಾಜಕೀಯ ಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ವ್ಯಕ್ತವಾಗುತ್ತಿದೆ.
ಈಗಾಗಲೇ ಗುಜರಾತ್‌ನಲ್ಲಿ ಅನೇಕ ದಿನಗಳಿಂದ ಬೀಡುಬಿಟ್ಟು ರಾಜಕೀಯ ತಂತ್ರಗಾರಿಕೆಯಲ್ಲಿ ಹೆಣೆಯುವುದರಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನಿರತರಾಗಿದ್ದು ಎಎಪಿ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸುವುದು ಶತ ಸಿದ್ದ ಎಂದು ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಅಹಮದಬಾದ್‌ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಗುಜರಾತಿನಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 2023ರ ಜನವರಿ 31ರ ಬಳಿಕ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗುವುದು ಮತ್ತು ನಿವೃತ್ತ ಸರ್ಕಾರಿ ನೌಕರರು ನಮ್ಮನ್ನು ಬೆ<ಬಲಿಸಿ ಎಂದು ಮನವಿ ಮಾಡಿದ್ದಾರೆ.

ದೆಹಲಿ ಮತ್ತು ಪಂಜಾಬ್‌ನಲ್ಲಿ ನಾನು ನುಡಿದ ಭವಿಷ್ಯವಾಣಿ ನಿಜವಾಗಿದೆ ಅದೇ ರೀತಿ ಗುಜರಾತ್‌ನಲ್ಲಿಯೂ ನಾನು ನುಡಿದ ಹಾಗೆಯೇ ಹಾಗುತ್ತದೆ. ಗುಜರಾತಿನ ಜನತೆ ಬಿಜೆಪಿ ಆಡಳಿತದ ಬಗ್ಗೆ ಭಯಗೊಂಡಿದ್ದಾರೆ ಮತ್ತು ಎಎಪಿಗೆ ಬಹಿರಂಗವಾಗಿ ಬೆಂಬಲ ಸೂಚಿಸುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
182 ಸದಸ್ಯ ಬಲದ ಗುಜಾರತ್ ವಿಧಾನಸಭೆಗೆ ಡಿಸೆಂಬರ್ 1 ಹಾಗೂ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದು ಡಿಸೆಂಬರ್ 8ರಂದು ಫಲಿತಾಂಸ ಪ್ರಕಟವಾಗಲಿದೆ.