ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಎಎಪಿ ಸರ್ಕಾರ ಮಹಿಳಾ ಪ್ರಯಾಣಿಕರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಎಂದು ಘೋಷಿಸಿತ್ತು. ಆದ್ರೆ ಈಗ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಚಾಲಕರು ಬಸ್ ನಿಲ್ಲಿಸುತ್ತಿಲ್ಲವಂತೆ. ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, (Arvindkejriwal) ಮಹಿಳೆಯರ ಪ್ರಯಾಣ ಉಚಿತ ಎಂಬ ಕಾರಣಕ್ಕೆ ಕೆಲ ಬಸ್ ಚಾಲಕರು ಮಹಿಳಾ ಪ್ರಯಾಣಿಕರನ್ನು ಕಂಡಾಗ ಬಸ್‌ಗಳನ್ನು ನಿಲ್ಲಿಸುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಈ ಘಟನೆಯನ್ನ ನಾನು ಸಮರ್ಥಿಸಿಕೊಳ್ಳುವುದಿಲ್ಲ, ಸಹಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಆರೋಪ ಕೇಳಿಬಂದಿರುವ ಬಸ್ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ದೆಹಲಿ ಸಿಎಂ ಕೇಜ್ರಿವಾಲ್ ಅವರ ಟ್ವೀಟ್ ಅನ್ನು ಹಂಚಿಕೊಂಡ ದೆಹಲಿ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್, ಚಾಲಕನನ್ನು ಬದಲಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಸೂಚನೆಯಂತೆ, ಚಾಲಕನನ್ನು ಬದಲಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಚಾಲಕ ಮತ್ತು ಇತರ ಸಿಬ್ಬಂದಿ ವಿರುದ್ಧ ತನಿಖೆ ಆರಂಭಿಸಲಾಗಿದೆ ಎಂದು ಗೆಹ್ಲೋಟ್ ಹೇಳಿದ್ದಾರೆ.