ಕೆ.ರಾಮ್ ನಾರಾಯಣ್ ನಿರ್ದೇಶಿಸಿ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸಿರುವ ಅಬ್ಬರ ಸಿನಿಮಾವು ನವೆಂಬರ್ 18ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ.
ಬಿಡುಗಡೆ ಕುರಿತು ಇತ್ತೀಚಿಗೆ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಚಿತ್ರದ ಕುರಿತು ಹಲವು ಕುತೂಹಲಕಾರಿ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಆ್ಯಕ್ಷನ್, ಫ್ಯಾಮಿಲಿ ಬಾಂಡಿಂಗ್, ಕಾಮಿಡಿ ಎಂಟರ್ಟೈನರ್ ಕಥಾಹಂದರ ಹೊಂದಿರೋ ಈ ಚಿತ್ರದಲ್ಲಿ ತಂದೆ ಮಗನ ನಡುವಿನಭಾವನಾತ್ಮಕ ಸಂಬಂಧ ಹಾಗೂ ಅದರ ಮಹತ್ವದ ಕುರಿತಂತೆ ಚಿತ್ರದಲ್ಲಿ ಹೇಳಲಾಗಿದೆ. ನಾಯಕ ತನ್ನ ಫ್ಯಾಮಿಲಿಗೋಸ್ಕರ ಏನೆಲ್ಲ ಮಾಡುತ್ತಾನೆ ಅನ್ನೋದನ್ನು ಪ್ರೇಕ್ಷಕರ ಮನಮುಟ್ಟುವ ಹಾಗೆ ನಿರೂಪಿಸಲಾಗಿದೆ. ತಂದೆ ಒಂದು ಒಂದು ತಪ್ಪು ಮಾಡ್ತಾನೆ, ಅದನ್ನು ಸರಿಪಡಿಸುವುಕ್ಕೆ ಹೋಗಿ ಮತ್ತೊಂದು ತಪ್ಪು ಮಾಡ್ತಾನೆ. ನಂತರ ಮಗ ಅದನ್ನು ಹೇಗೆ ಸರಿಪಡಿಸ್ತಾನೆ ಅನ್ನೋದೇ ಈ ಚಿತ್ರದ ಎಳೆ

ಪ್ರಜ್ವಲ್ ಜೊತೆ ರಾಜಶ್ರೀ ಪೊನ್ನಪ್ಪ, ನಿಮಿಕಾ ರತ್ನಾಕರ್ ಹಾಗೂ ಲೇಖಾಚಂದ್ರ ನಾಯಕಿಯರಾಗಿ ಅಭಿನಯಿಸಿದ್ದಾರೆ. ಇನ್ನುಳಿದಂತೆ ತಾರಾಗಣದಲ್ಲಿ ಶೋಭರಾಜ್, ರವಿಶಂಕರ್, ಶಂಕರ್ ಅಶ್ವಥ್, ವಿಕ್ಟರಿವಾಸು, ಕೋಟೆ ಪ್ರಭಾಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದು ಜೆ.ಕೆ.ಗಣೇಶ್ ಅವರ ಕ್ಯಾಮೆರಾವರ್ಕ್, ಸಿ. ಅಂಡ್ ಎಂ.ಮೂವೀಸ್ ಲಾಂಛನದಲ್ಲಿ ಬಸವರಾಜ್ ಮಂಚಯ್ಯ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.






