ಬೆಂಗಳೂರು : ಕಳೆದ ಅನೇಕ ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಇಂದು ಅದ್ಧೂರಿ ಸಮಾರಂಭದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಅದ್ಧೂರಿ ಸಮಾರಂಭದಲ್ಲಿ ಅಭಿಷೇಕ್ ಅಂಬರೀಶ್ ಅವಿವಾ ಬಿದ್ದಪ್ಪಗೆ ಮಾಂಗಲ್ಯಧಾರಣೆ ಮಾಡಿದ್ರು. ಮದುವೆ ಸಮಾರಂಭಕ್ಕೆ ಕುಟುಂಬಸ್ಥರು, ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದ್ದು ನವಜೋಡಿಗೆ ಶುಭ ಹಾರೈಸುತ್ತಿದ್ದಾರೆ.
ಒಕ್ಕಲಿಗ ಸಮುದಾಯದ ಸಂಪ್ರದಾಯದಂತೆ ಅವಿವಾ ಬಿದ್ದಪ್ಪ ಹಾಗೂ ಅಭಿಷೇಕ್ ಅಂಬರೀಶ್ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಮದುವೆ ಕಾರ್ಯಗಳು ಇನ್ನೂ ಬಾಕಿಯಿದ್ದು ಒಬ್ಬೊಬ್ಬರಾಗಿಯೇ ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ.