• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮತಾಂತರ ನಿಷೇಧ ಕಾಯ್ದೆ ಕುರಿತು ಬಿಜೆಪಿ ನಾಯಕರ ಮುಖ ಬಯಲು: ಸರ್ಕಾರಿ ಅಂಕಿ ಅಂಶಗಳು ಹೇಳುವ ಸತ್ಯವೇ ಭಿನ್ನ

Any Mind by Any Mind
January 20, 2022
in ಕರ್ನಾಟಕ
0
ಮತಾಂತರ ನಿಷೇಧ ಕಾಯ್ದೆ ಕುರಿತು ಬಿಜೆಪಿ ನಾಯಕರ ಮುಖ ಬಯಲು: ಸರ್ಕಾರಿ ಅಂಕಿ ಅಂಶಗಳು ಹೇಳುವ ಸತ್ಯವೇ ಭಿನ್ನ
Share on WhatsAppShare on FacebookShare on Telegram

ADVERTISEMENT

ಬೆಳಗಾವಿ ಅಧಿವೇಶನಕ್ಕೂ ಮುನ್ನ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿದ್ದ ಮತಾಂತರ ನಿಷೇಧ ಕಾಯ್ದೆ ಹಿನ್ನೆಲೆಯಲ್ಲಿ ಸರ್ಕಾರದ ಅಂಕಿ ಅಂಶಗಳನ್ನೇ ಗಮನಿಸಿದರೆ ಬಿಜೆಪಿಯ ನಾಯಕರ ಮತ್ತೊಂದು ಮುಖ ದರ್ಶನ ರಾಜ್ಯದ ಜನತೆಗೆ ತಿಳಿಯುತ್ತದೆ.

ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಬಲವಂತದ ಮತಾಂತರ, ಆಮಿಷ ನೀಡಿ ಮತಾಂತರಗೊಳಿಸುವುದು ಹಾಗೂ ಅನೈತಿಕ ಮಾರ್ಗಗಳ ಮೂಲಕ ಮತಾಂತರ ನಡೆಯಲಾಗುತ್ತಿದೆ. ರಾಜ್ಯಾದ್ಯಂತ ಸಾಮೂಹಿಕ ಮತಾಂತರ ಕೃತ್ಯಗಳು ಸಾಕಷ್ಟು ನಡೆಯುತಿದ್ದು, ಇದನ್ನು ತಪ್ಪಿಸಲು ʼಮತಾಂತರ ನಿಷೇಧ ಕಾಯ್ದೆʼ ಜಾರಿ ತರಲು ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸರ್ಕಾರದ ನಡೆಯನ್ನು ಈ ಹಿಂದೆ ಸಮರ್ಥಿಸಿಕೊಂಡಿದ್ದರು.

ಆದರೆ, ರಾಜ್ಯದ ವಸ್ತುಸ್ಥಿತಿ ಬೇರೆಯೇ ಇದೆ. ರಾಜ್ಯ ಸರ್ಕಾರವೇ ಬಿಂಬಿಸಿರುವ ರೀತಿಯಲ್ಲಿ ಕರ್ನಾಟಕದಲ್ಲಿ ಮತಾಂತರ ನಡೆದಿಲ್ಲ ಎನ್ನುವುದನ್ನು ಸರ್ಕಾರದ ಅಂಕಿ-ಅಂಶಗಳೇ ಸಾಭೀತು ಪಡಿಸುತ್ತಿವೆ. ಈ ಕುರಿತು ದಾಖಲೆ ಸಮೇತ ʼದಿ ಫೈಲ್ʼ ವರದಿ ಮಾಡಿದೆ.

ಕರ್ನಾಟಕದಲ್ಲಿ ನಾಲ್ಕು ವರ್ಷಗಳಲ್ಲಿ ( 2018, 2019, 2020, 2021) ಮತಾಂತರ ವಿಚಾರವಾಗಿ ೧೬ ಪ್ರಕರಣಗಳು ದಾಖಲಾಗಿವೆ. ಗಮನಾರ್ಹ ಸಂಗತಿ ಎಂದರೆ 2021 ರ ಫೆಬ್ರವರಿ ಅಧಿವೇಶನದಲ್ಲಿ ʼಕರ್ನಾಟಕ ಧಾರ್ಮಿಕ ಹಕ್ಕುಗಳ ಸಂರಕ್ಷಣಾ ವಿಧೇಯಕʼ ಮಂಡಿಸಲು ಮುಂದಾದಾಗ ಹೊಸದುರ್ಗದ ಶಾಸಕ ಗೂಳಿಹಟ್ಟಿ ಚಂದ್ರಶೇಖರ್ ಅವರು ಪ್ರಶ್ನೆಗೆ ಅಂದಿನ ಗೃಹ ಸಚಿವ ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಸ್ವತಃ ಉತ್ತರಿಸಿ ಈ ಅಂಕಿ ಅಂಶಗಳನ್ನು ಸದನದ ಗಮನಕ್ಕೆ ತಂದಿದ್ದರು.

ರಾಜ್ಯದಲ್ಲಿ 2018 ರಲ್ಲಿ ಮೂರು, 2019ರ್ಲಿ ಏಳು, 2020ರಲ್ಲಿ ಐದು ಹಾಗೂ 2021ರಲ್ಲಿ ಒಂದು ಪ್ರಕರಣ ದಾಖಲಾಗಿವೆ. ಅದರಲ್ಲೂ ರಾಜಧಾನಿಯಲ್ಲಿ 2018 ರಲ್ಲಿ ಒಂದು, 2019ರಲ್ಲಿ ಒಂದು, 2020ರಲ್ಲಿ ಎರಡು ಪ್ರಕರಣ ದಾಖಲಾಗಿದ್ದು, ಕೊಡಗು, ಮಂಗಳೂರು ಹಾಗೂ ಚಿಕ್ಕಮಗಳೂರಲ್ಲಿ ಮೂರು ವರ್ಷದಲ್ಲಿ ಕೇವಲ ಒಂದೇ ಒಂದು ಪ್ರಕರಣ ದಾಖಲಾಗಿಲ್ಲ ಎಂಬುದು ಗಮನಿಸಬೇಕಾದ ಸಂಗತಿ.

ಮಂಡ್ಯ ಜಿಲ್ಲೆಯಲ್ಲಿ 2019 ರಲ್ಲಿ 1, 2020 ರಲ್ಲಿ 2, 2021, ರಲ್ಲಿ1 ಹಾಗೂ ಮೈಸೂರು ಜಿಲ್ಲೆಯಲ್ಲಿ 2020 ರಲ್ಲಿ 1 ಪ್ರಕರಣ ದಾಖಲಾಗಿದೆ. ರಾಮನಗರದಲ್ಲಿ 2019 ರಲ್ಲಿ 2, ಹಾಸನ ಜಿಲ್ಲೆಯಲ್ಲಿ 2018 ರಲ್ಲಿ 2, ಧಾರವಾಡದಲ್ಲಿ 2019 ರಲ್ಲಿ 1, ಉಡುಪಿಯಲ್ಲಿ 2019 ರಲ್ಲಿ 1 ಪ್ರಕರಣ ದಾಖಲಾಗಿದೆ.

Tags: AragabasavarajbommaiBJPCongress PartyCovid 19karanatakanewspratidhvaninewsಬೆಳಗಾವಿಮತಾಂತರ
Previous Post

ಕರೋನಾ ನಿಯಮಾವಳಿ ಕುರಿತು ನಾಳೆ ಸೂಕ್ತ ನಿರ್ಧಾರ : ಅಶ್ವಥ್ ನಾರಾಯಣ

Next Post

UttarPradesh| ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನ ವಿರುದ್ದ ಮುಗಿಬಿದ್ದ ಗ್ರಾಮಸ್ಥರು

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
UttarPradesh| ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನ ವಿರುದ್ದ ಮುಗಿಬಿದ್ದ ಗ್ರಾಮಸ್ಥರು

UttarPradesh| ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನ ವಿರುದ್ದ ಮುಗಿಬಿದ್ದ ಗ್ರಾಮಸ್ಥರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!