• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ.ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 2, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ.ಸಿದ್ದರಾಮಯ್ಯ
Share on WhatsAppShare on FacebookShare on Telegram

ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು: ಸಿ.ಎಂ.ಬಣ್ಣನೆ

ADVERTISEMENT

*ನಾನು, ನಮ್ಮ‌ ಸರ್ಕಾರ ಈ ದಿಕ್ಕಿನಲ್ಲಿದೆ: ಸಿ.ಎಂ

ಬೆಂಗಳೂರು ಅ 2:
ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿಯವರ ಮಾತನ್ನು ಪುನರುಚ್ಚರಿಸಿದರು.

ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಯಾರಾದರೂ ಹೊಗಳಲಿ, ತೆಗಳಲಿ. ಟೀಕೆ ಮಾಡಲಿ, ಬಿಡಲಿ. ಉಳಿದವರು ಗುರುತಿಸಲಿ ಬಿಡಲಿ ನಾವು ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದರು.

ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪ್ರಾಮಾಣಿಕ ನಾಯಕರು ಮತ್ತು ರಾಜಕಾರಣಿ. ಇವರೆಲ್ಲರ ಬದುಕಿನ ಸಂದೇಶಗಳು ನಮಗೆ ಮಾರ್ಗದರ್ಶನವಾದರೆ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ನಾವು ಈ ಮಹಾತ್ಮರಿಗೆ ಸಲ್ಲಿಸುವ ಗೌರವ ಎಂದರು‌.

ಗಾಂಧಿಯವರ ಹೋರಾಟದಿಂದಾಗಿ ನಾವು ಸ್ವಾಂತ್ರ್ಯದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಜಗತ್ತಿನ ನಾಯಕರು ಎನ್ನುವ ಗೌರವ ಸಿಕ್ಕಿರುವ ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ ಎಂದರು.

ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಗಾಂಧಿ ಭವನ‌ ಕಾರ್ಯದರ್ಶಿ ವಿಶುಕುಮಾರ್, “ಎಲ್ಲರ ಗಾಂಧಿ” ಕೃತಿಯ ಲೇಖಕರಾದ ನಟರಾಜ್ ಹುಳಿಯಾರ್ ಸೇರಿ‌ ಹಲವು ಸಾಧಕರು ಉಪಸ್ಥಿತರಿದ್ದರು.

Tags: birthday bash siddaramaiahBJPCongress PartyRahul Gandhirahul gandhi on siddaramaiahrahul gandhi siddaramaiahrahul gandhi to attend siddaramaiah's birthday bashsiddaramaiahsiddaramaiah birthdaysiddaramaiah birthday celebrationsiddaramaiah birthday davangeresiddaramaiah birthday livesiddaramaiah birthday updatessiddaramaiah birthday videosiddaramaiah latest newssiddaramaiah newssiddaramaiah todaysiddaramaiah today newsಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನನ್ನ ಸ್ನೇಹಿತ ಒಂದು ದಿನ ಪ್ರತಿಫಲ ಅನುಭವಿಸ್ತಾರೆ ಎಂದ ಚೆಲುವರಾಯಸ್ವಾಮಿ..!

Next Post

ಬೆಂಗಳೂರಲ್ಲಿ ‘BMTC’ ಬಸ್ ಕಂಡಕ್ಟರ್ ಗೆ ಚಾಕು ಇರಿದ ಭೂಪ : ಭಯಾನಕ ವಿಡಿಯೋ ವೈರಲ್.!

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
Next Post

ಬೆಂಗಳೂರಲ್ಲಿ 'BMTC' ಬಸ್ ಕಂಡಕ್ಟರ್ ಗೆ ಚಾಕು ಇರಿದ ಭೂಪ : ಭಯಾನಕ ವಿಡಿಯೋ ವೈರಲ್.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada