ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್( Yogi Adityanath ) ಅವರ ತವರೂರಾದ ಗೋರಖ್‌ಪುರದಲ್ಲಿರುವ ( Gorakhpur ) ದೀನ್ ದಯಾಳ್ ಉಪಾಧ್ಯಾಯ ವಿಶ್ವವಿದ್ಯಾಲಯದ ( deen dayal upadhyay university ) ಉಪಕುಲಪತಿ ಮತ್ತು ರಿಜಿಸ್ಟ್ರಾರ್‌ಗೆ ಶುಕ್ರವಾರ ಸಂಜೆ ಎಬಿವಿಪಿ ಕಾರ್ಯಕರ್ತರು ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಈ ಗಲಾಟೆಯನ್ನ ತಡೆಯಲು ಬಂದ ಪೊಲೀಸರ ಮೇಲೂ ಎಬಿವಿಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಎಬಿವಿಪಿ ಕಾರ್ಯಕರ್ತರು ಗೂಂಡಾ ವರ್ತನೆಯನ್ನ ತೋರಿದ್ದಾರೆ ಎನ್ನಲಾಗಿದೆ.
ಆರ್‌ಎಸ್‌ಎಸ್-ಬಿಜೆಪಿಯ ( RSS – BJP ) ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿಯ ( ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ) ಸದಸ್ಯರು ಉಪಕುಲಪತಿಗಳ ಕೊಠಡಿಯನ್ನು ಧ್ವಂಸಗೊಳಿಸಿದ್ದು ಮಾತ್ರವಲ್ಲದೆ ವಿಶ್ವ ವಿದ್ಯಾಲಯಕ್ಕೆ ಸಂಬಂಧ ಪಟ್ಟ ಪೀಠೋಪಕರಣಗಳನ್ನ ಕೂಡ ದ್ವಂಸ ಮಾಡಿದ್ದಾರೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಈ ವೇಳೆ ಎಬಿವಿಪಿ ಕಾರ್ಯಕರ್ತರು ಪೊಲೀಸರಿಗೆ ಹೊಡೆದಿರುವ ದೃಷ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನು ಈ ಗಲಾಟೆಯಲ್ಲಿ ಉಪಕುಲಪತಿ ರಾಜೇಶ್ ಸಿಂಗ್ ಮತ್ತು ಮತ್ತು ವಿಶ್ವ ವಿದ್ಯಾಲಯದ ಕಾರ್ಯನಿರ್ವಾಹಕ ರಿಜಿಸ್ಟ್ರಾರ್ ಅಜಯ್ ಸಿಂಗ್ ಮತ್ತು ಹಲವು ಪೊಲೀಸರು ಗಾಯಗೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸುಮಾರು 10 ಕ್ಕೂ ಹೆಚ್ಚು ಮಂದಿ ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ, ಇನ್ನು ಘಟನೆಯನಲ್ಲಿ ನಾಲ್ವರು ಕಾರ್ಯಕರ್ತರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಈ ಘಟನೆಗೆ ಪ್ರಮುಖವಾದ ಕಾರಣ ವಿಶ್ವ ವಿದ್ಯಾಯಲಯದಲ್ಲಿ ನಡೆದಿದೆ ಎನ್ನಲಾದ ಅಕ್ರಮ, ಈ ಅಕ್ರಮಕ್ಕೆ ಸಂಬಂಧ ಪಟ್ಟಂತೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ ಘಟನೆ ಇಷ್ಟೇ ಆಗಿದ್ದರೆ ಈ ಪ್ರಕರಣ ಇಷ್ಟು ದೊಡ್ಡ ಮಟ್ಟದಲ್ಲಿ ಆಗುತ್ತಿರಲಿಲ್ಲ, ಬದಲಿಗೆ ತಮ್ಮ ಪ್ರತಿಭಟನೆಗೆ ಸೂಕ್ತ ರೀತಿಯ ಸ್ಪಂದನೆ ದೊರೆತಿಲ್ಲ ಎಂಬ ಕಾರಣಕ್ಕೆ ವಿದ್ಯೆ ಕೊಡುವ ಗುರುಗಳ ಮೇಲೆಯೇ ಹಲ್ಲೆ ಎಬಿವಿಪಿ ಕಾರ್ಯಕರ್ತರು ಹಲ್ಲೆ ನಡೆಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಕಾಡುತ್ತಿದೆ.
ಇತ್ತೀಚೆಗೆ ದೇಶಾದ್ಯಂತ ಯುಪಿ ಮಾಡೆಲ್ ಎಂದು ಬಿಜೆಪಿ ಸಿಕ್ಕಾಪಟ್ಟೆ ಪ್ರಚಾರ ಮಾಡುತ್ತಿದೆ, ಆದರೆ ಇದೇ ಯುಪಿಯಲ್ಲಿ ಬಿಜೆಪಿಯ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕಾರ್ಯಕರ್ತರು ಪೊಲೀಸರು ಹಾಗೂ ವಿವಿ ಕುಲಪತಿಗಳ ಮೇಲೆ ಹಲ್ಲೆ ನಡೆಸಿರೋದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ, ಇನ್ನೂ ಎಬಿವಿಪಿ ಕಾರ್ಯಕರ್ತರ ದುರ್ನಡತೆ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಿಎಂ ತವರೂರಲ್ಲೇ ಪೊಲೀಸರ ಹಾಗೂ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಸಾಮಾಜಿಕ ಜಾಲತಾಣ ಹಾಗೂ ವಿವಿಧ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.