• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ABVP ; ಗೂಂಡಗಳ ರೀತಿ ವರ್ತಿಸಿದ ಎಬಿವಿಪಿ ಕಾರ್ಯಕರ್ತರು..!?

ಪ್ರತಿಧ್ವನಿ by ಪ್ರತಿಧ್ವನಿ
July 23, 2023
in ದೇಶ, ರಾಜಕೀಯ
0
ABVP ; ಗೂಂಡಗಳ ರೀತಿ ವರ್ತಿಸಿದ ಎಬಿವಿಪಿ ಕಾರ್ಯಕರ್ತರು..!?
Share on WhatsAppShare on FacebookShare on Telegram

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್( Yogi Adityanath ) ಅವರ ತವರೂರಾದ ಗೋರಖ್‌ಪುರದಲ್ಲಿರುವ ( Gorakhpur ) ದೀನ್ ದಯಾಳ್ ಉಪಾಧ್ಯಾಯ ವಿಶ್ವವಿದ್ಯಾಲಯದ ( deen dayal upadhyay university ) ಉಪಕುಲಪತಿ ಮತ್ತು ರಿಜಿಸ್ಟ್ರಾರ್‌ಗೆ ಶುಕ್ರವಾರ ಸಂಜೆ ಎಬಿವಿಪಿ ಕಾರ್ಯಕರ್ತರು ಥಳಿಸಿರುವ ವಿಡಿಯೋ ವೈರಲ್‌ ಆಗಿದೆ. ಈ ಗಲಾಟೆಯನ್ನ ತಡೆಯಲು ಬಂದ ಪೊಲೀಸರ ಮೇಲೂ ಎಬಿವಿಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಎಬಿವಿಪಿ ಕಾರ್ಯಕರ್ತರು ಗೂಂಡಾ ವರ್ತನೆಯನ್ನ ತೋರಿದ್ದಾರೆ ಎನ್ನಲಾಗಿದೆ.

ADVERTISEMENT

ಆರ್‌ಎಸ್‌ಎಸ್‌-ಬಿಜೆಪಿಯ ( RSS – BJP ) ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿಯ ( ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ) ಸದಸ್ಯರು ಉಪಕುಲಪತಿಗಳ ಕೊಠಡಿಯನ್ನು ಧ್ವಂಸಗೊಳಿಸಿದ್ದು ಮಾತ್ರವಲ್ಲದೆ ವಿಶ್ವ ವಿದ್ಯಾಲಯಕ್ಕೆ ಸಂಬಂಧ ಪಟ್ಟ ಪೀಠೋಪಕರಣಗಳನ್ನ ಕೂಡ ದ್ವಂಸ ಮಾಡಿದ್ದಾರೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಈ ವೇಳೆ ಎಬಿವಿಪಿ ಕಾರ್ಯಕರ್ತರು ಪೊಲೀಸರಿಗೆ ಹೊಡೆದಿರುವ ದೃಷ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇನ್ನು ಈ ಗಲಾಟೆಯಲ್ಲಿ ಉಪಕುಲಪತಿ ರಾಜೇಶ್ ಸಿಂಗ್ ಮತ್ತು ಮತ್ತು ವಿಶ್ವ ವಿದ್ಯಾಲಯದ ಕಾರ್ಯನಿರ್ವಾಹಕ ರಿಜಿಸ್ಟ್ರಾರ್ ಅಜಯ್ ಸಿಂಗ್ ಮತ್ತು ಹಲವು ಪೊಲೀಸರು ಗಾಯಗೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸುಮಾರು 10 ಕ್ಕೂ ಹೆಚ್ಚು ಮಂದಿ ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ, ಇನ್ನು ಘಟನೆಯನಲ್ಲಿ ನಾಲ್ವರು ಕಾರ್ಯಕರ್ತರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಈ ಘಟನೆಗೆ ಪ್ರಮುಖವಾದ ಕಾರಣ ವಿಶ್ವ ವಿದ್ಯಾಯಲಯದಲ್ಲಿ ನಡೆದಿದೆ ಎನ್ನಲಾದ ಅಕ್ರಮ, ಈ ಅಕ್ರಮಕ್ಕೆ ಸಂಬಂಧ ಪಟ್ಟಂತೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ ಘಟನೆ ಇಷ್ಟೇ ಆಗಿದ್ದರೆ ಈ ಪ್ರಕರಣ ಇಷ್ಟು ದೊಡ್ಡ ಮಟ್ಟದಲ್ಲಿ ಆಗುತ್ತಿರಲಿಲ್ಲ, ಬದಲಿಗೆ ತಮ್ಮ ಪ್ರತಿಭಟನೆಗೆ ಸೂಕ್ತ ರೀತಿಯ ಸ್ಪಂದನೆ ದೊರೆತಿಲ್ಲ ಎಂಬ ಕಾರಣಕ್ಕೆ ವಿದ್ಯೆ ಕೊಡುವ ಗುರುಗಳ ಮೇಲೆಯೇ ಹಲ್ಲೆ ಎಬಿವಿಪಿ ಕಾರ್ಯಕರ್ತರು ಹಲ್ಲೆ ನಡೆಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಕಾಡುತ್ತಿದೆ.

ಇತ್ತೀಚೆಗೆ ದೇಶಾದ್ಯಂತ ಯುಪಿ ಮಾಡೆಲ್‌ ಎಂದು ಬಿಜೆಪಿ ಸಿಕ್ಕಾಪಟ್ಟೆ ಪ್ರಚಾರ ಮಾಡುತ್ತಿದೆ, ಆದರೆ ಇದೇ ಯುಪಿಯಲ್ಲಿ ಬಿಜೆಪಿಯ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕಾರ್ಯಕರ್ತರು ಪೊಲೀಸರು ಹಾಗೂ ವಿವಿ ಕುಲಪತಿಗಳ ಮೇಲೆ ಹಲ್ಲೆ ನಡೆಸಿರೋದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ, ಇನ್ನೂ ಎಬಿವಿಪಿ ಕಾರ್ಯಕರ್ತರ ದುರ್ನಡತೆ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಸಿಎಂ ತವರೂರಲ್ಲೇ ಪೊಲೀಸರ ಹಾಗೂ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಸಾಮಾಜಿಕ ಜಾಲತಾಣ ಹಾಗೂ ವಿವಿಧ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

#WATCH :In #Gorakhpur University, #ABVP people first beat up the Inspector, then ran and beat the Vice-Chancellor and Registrar of the University.#GorakhpurUniversity #UPYogiSarkar #UPPoliceInNews #ProjectKGlimpse #ManipurVideo #earthquake #YogiAdityanath pic.twitter.com/hI1Ob9jb6p

— Kashmir Local News (@local_kashmir) July 22, 2023
Tags: ABVPBJPdeen dayal upadhyay universityGorakhpurYogi Adityanath
Previous Post

ಗಬ್ಬೆದ್ದು ನಾರುತ್ತಿರುವ ನಗರಸಭಾ ಕಚೇರಿ ಕುರ್ಚಿಗಳು…ಎಲ್ಲಿದೆ ಅಭಿವೃದ್ದಿ ಕಾರ್ಯ…!

Next Post

ನೈಸ್‌ ರೋಡ್‌ ಹಗರಣ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ನೈಸ್‌ ರೋಡ್‌ ಹಗರಣ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ

ನೈಸ್‌ ರೋಡ್‌ ಹಗರಣ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada