ಚಿತ್ರದುರ್ಗ: ಕಾಲೇಜು ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿನಿ ಮೃತಪಟ್ಟಿದ್ದಳು ಈ ವಿಚಾರ ತಿಳಿದು ಎಬಿವಿಬಿ ಕಾರ್ಯಕರ್ತರು ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

ನಗರದ ಚಿತ್ರಾ ಡಾನ್ ಬಾಸ್ಕೋ ಕಾಲೇಜಿನ ಮೂರನೇ ಮಹಡಿಯಿಂದ ಜಿಗಿದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಪ್ರೇಮಾಳನ್ನು ತಕ್ಷಣ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದಳು,
ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಪ್ರೇಮಾ ಮೃತ ವಿದ್ಯಾರ್ಥಿನಿ. ಬೆಳಗ್ಗೆ ಕಾಲೇಜಿಗೆ ಬಂದಾಗ ಈ ಘಟನೆ ನಡೆದಿದೆ.

ಈ ವಿಚಾರ ತಿಳಿದ ಎಬಿವಿಪಿ ಕಾರ್ಯಕರ್ತರ ಕಾಲೇಜು ಬಳಿ ಧಾವಿಸಿ ಪ್ರತಿಭಟನೆ ನಡೆಸಿದ್ದಾರೆ. ಕಾಲೇಜು ಸಿಬ್ಬಂದಿಯೊಬ್ಬ ಕಾಲೇಜು ಮುಂದೆ ಯಾಕೆ ಪ್ರತಿಭಟನೆ ಮಾಡುತ್ತ ಇದ್ದೀರಾ ಎಂದು ಹೇಳಿದ್ದಾರೆ ಇದಕ್ಕೆ ಇದಕ್ಕೆ ಪ್ರತಿಕ್ರಿಯೆಸಿದ ಕಾರ್ಯಕರ್ತರು ಶಿಕ್ಷಕನ ಮೇಲೆ ಕೈ ಕೈ ಮಿಲಸಿ, ಕಪ್ಪಳಮೋಕ್ಷ ಮಾಡಿದ್ದಾರೆ.
ಒಟ್ಟಿನಲ್ಲಿ ಪ್ರೇಮಾಳ ಸಾವಿನ ಬಗ್ಗೆ ಕ್ಷಣ ಕ್ಷಣಕ್ಕೂ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.