ತ್ರಿವರ್ಣ ಧ್ವಜಕ್ಕಿಂತಲೂ ಮೇಲೆ ಕೇಸರಿ ಧ್ವಜವನ್ನು ಹಾರಿಸಿ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪದಡಿ ಶಿಕ್ಷಣ ಸಚಿವ . ನಾಗೇಶ್ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಟ್ವೀಟ್ ಮೂಲಕ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

“ರಾಷ್ಟ್ರಧ್ವಜದ ಬಣ್ಣಗಳೇ ತಿಳಿಯದವರು, ದಿಕ್ಕು ತಪ್ಪಿಸಲೆಂದೇ ಒಂದು ಚಿತ್ರವನ್ನು ಬಳಸಿಕೊಂಡು ಸುಳ್ಳಿನ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಹತಾಶೆಯಿಂದ ಸುಳ್ಳು ಹೇಳುವುದನ್ನೆ ಅವರು ಅಜೆಂಡಾ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಆದರೆ, ಈ ನೈಜ ಚಿತ್ರಗಳು ಅವರ ಹಸಿ ಹಸಿ ಸುಳ್ಳುಗಳನ್ನು ಬಯಲು ಮಾಡುತ್ತವೆ” ಎಂದು ಟ್ವೀಟ್ ಮಾಡಿದ್ದಾರೆ.