ಹೊಸದಿಲ್ಲಿ:ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಲೋಕಸಭೆ ಸಂಸದ Lok Sabha MP ಇಂಜಿನಿಯರ್ ರಶೀದ್‌ಗೆ Rashid)ದಿಲ್ಲಿ ನ್ಯಾಯಾಲಯವು ಅಕ್ಟೋಬರ್ 2ರವರೆಗೆ ಮಧ್ಯಂತರ ಜಾಮೀನು (court granted interim bail)ಮಂಜೂರು ಮಾಡಿದೆ ಇಂಜಿನಿಯರ್ ರಶೀದ್ Rashid ಎಂದೇ ಜನಪ್ರಿಯರಾಗಿರುವ ಶೇಖ್ ಅಬ್ದುಲ್ ರಶೀದ್ Sheikh Abdul Rasheed)ಅವರು 2024 ರ ಲೋಕಸಭೆ ಚುನಾವಣೆಯಲ್ಲಿ (Lok Sabha elections)ಬಾರಾಮುಲ್ಲಾದಲ್ಲಿ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿದ್ದರು.
ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದ ರಶೀದ್‌ಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ರಿಲೀಫ್ ನೀಡಿದರು. ಜುಲೈ 5 ರಂದು, ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ನ್ಯಾಯಾಲಯ ರಶೀದ್‌ಗೆ ಕಸ್ಟಡಿ ಪೆರೋಲ್ ನೀಡಿತ್ತು.
2017 ರ ಭಯೋತ್ಪಾದಕ ನಿಧಿ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) prevention)ಕಾಯ್ದೆಯಡಿ ರಾಷ್ಟ್ರೀಯ ತನಿಖಾ National Inquiry ಸಂಸ್ಥೆ (ಎನ್‌ಐಎ) NIA ಬಂಧಿಸಿದ ನಂತರ ರಶೀದ್ 2019 ರಿಂದ ಜೈಲಿನಲ್ಲಿದ್ದಾರೆ.ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.ಅವರ ಸಾಮಾನ್ಯ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕ ಗುಂಪುಗಳು ಮತ್ತು ಪ್ರತ್ಯೇಕತಾವಾದಿಗಳಿಗೆ ಧನಸಹಾಯ ಮಾಡಿದ ಆರೋಪದ ಮೇಲೆ ಎನ್‌ಐಎಯಿಂದ ಬಂಧಿಸಲ್ಪಟ್ಟ ಕಾಶ್ಮೀರಿ ಉದ್ಯಮಿ ಜಹೂರ್ ವಾತಾಲಿ ಅವರ ತನಿಖೆಯ ಸಮಯದಲ್ಲಿ ರಶೀದ್‌ನ ಹೆಸರು ಈ ಪ್ರಕರಣದಲ್ಲಿ ಬೆಳಕಿಗೆ ಬಂದಿತು.
ಈ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್, ಲಷ್ಕರ್-ಎ-ತೊಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ಸೇರಿದಂತೆ ಹಲವರ ವಿರುದ್ಧ ಎನ್‌ಐಎ ಚಾರ್ಜ್ ಶೀಟ್ ಸಲ್ಲಿಸಿತ್ತು. 2022 ರಲ್ಲಿ ಮಲಿಕ್ ಅವರು ಆರೋಪಗಳಿಗೆ ತಪ್ಪೊಪ್ಪಿಕೊಂಡ ನಂತರ ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿತು.