• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

2 ವರ್ಷಗಳಿಂದ ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಬಂಧನ..!

Any Mind by Any Mind
September 30, 2023
in Top Story, ಇದೀಗ, ಕರ್ನಾಟಕ
0
2 ವರ್ಷಗಳಿಂದ ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ  ಬಂಧನ..!
Share on WhatsAppShare on FacebookShare on Telegram

ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್‌ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ದಾವಣಗೆರೆ ಸೇರಿದಂತೆ ಕೆಲವೆಡೆ ಕಾರ್ಯಾಚರಣೆ ನಡೆಸಿದ ಸಿಸಿಬಿ, ಪತ್ರ ಬರೆದಿರುವ ಶಂಕೆಯ ಮೇರೆಗೆ 8 ಮಂದಿಯನ್ನು ವಶಕ್ಕೆ ಪಡೆದಿತ್ತು. ಈ ಪೈಕಿ ಶಿವಾಜಿ ರಾವ್‌ ಜಾಧವ್ ಮೇಲೆ ಸಿಸಿಬಿಗೆ ಪ್ರಬಲ ಗುಮಾನಿ ವ್ಯಕ್ತವಾಗಿತ್ತು. 41 ವರ್ಷ ವಯಸ್ಸಿನ ಆತ (ಆರೋಪಿ) ಎಂಟನೇ ತರಗತಿ ಪಾಸ್ ಆಗಿದ್ದು, ಪ್ರಿಂಟಿಂಗ್ ಪ್ರೆಸ್ ನಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನಿಂದ ಹೆಚ್ಚಿನ ಮಾಹಿತಿ ಪಡೆಯಲು ಸಿಸಿಬಿ 10 ದಿನಗಳ ಪೊಲೀಸ್ ಕಸ್ಟಡಿ ಪಡೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಸಿಕ್ಕಿರುವ ಮಾಹಿತಿಯ ಪ್ರಕಾರ, ರಾಜ್ಯದ 15 ಕ್ಕೂ ಹೆಚ್ಚು ಸಾಹಿತಿಗಳು ಮತ್ತು ಬುದ್ಧಿಜೀವಿಗಳು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಅವರನ್ನು ಭೇಟಿ ಮಾಡಿ, ಕಳೆದ ಒಂದು ವರ್ಷದಿಂದ ತಮಗೆ ಬೆದರಿಕೆ ಪತ್ರಗಳು ಬರುತ್ತಿವೆ ಎಂದು ತಿಳಿಸಿದ್ದರು.

ADVERTISEMENT

ಖ್ಯಾತ ಸಾಹಿತಿಗಳಾದ ಕುಂ.ವೀರಭದ್ರಪ್ಪ, ಬಂಜಗೆರೆ ಜಯಪ್ರಕಾಶ್, ಬಿ.ಎಲ್.ವೇಣು, ಬಿ.ಟಿ.ಲಲಿತಾ ನಾಯಕ್‌, ವಸುಂಧರ ಭೂಪತಿ ಸೇರಿದಂತೆ ಕೆಲವು ಸ್ವಾಮೀಜಿಗಳಿಗೆ ಅನಾಮಧೇಯ ಹೆಸರಿನಲ್ಲಿ ಜೀವ ಬೆದರಿಕೆ ಪತ್ರಗಳು ಬಂದಿದ್ದವು. ಈ ಪತ್ರಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು, ಇದರ ಹಿಂದಿರುವವರನ್ನು ಪತ್ತೆ ಹಚ್ಚಲು ಸಿಸಿಬಿಗೆ ತನಿಖೆಗೆ ವಹಿಸಿತ್ತು. ಪತ್ರಗಳು ನಿರಂತರವಾಗಿ ಬರುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಏಳು ಕಡೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಒಂದೇ ಒಂದು ಕೈಬರಹದಿಂದ ಕೊಲೆ ಬೆದರಿಕೆ ಬಂದಿದೆ ಎನ್ನುವುದು ವಿಧಿ ವಿಜ್ಞಾನ ಪ್ರಯೋಗಾಲಯದ (FSL) ಪರೀಕ್ಷೆಯಿಂದ ದೃಢಪಟ್ಟಿತ್ತು. ತನಿಖೆಯಿಂದ ದಾವಣಗೆರೆ ಮೂಲದಿಂದ ಪತ್ರ ಬಂದಿದ್ದರೂ ಬೇರೆ ಬೇರೆ ತಾಲೂಕು, ಜಿಲ್ಲೆಗಳಿಗೆ ಹೋಗಿ ಪೋಸ್ಟ್‌ ಮಾಡಲಾಗಿತ್ತು.

ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿಕೆ

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿ ಆರೆಸ್ಟ್ ಪ್ರಕರಣ,ರಾಜ್ಯದ ಪ್ರಮುಖ ಸಾಹಿತಿಗಳಿಗೆ ಬೆದರಿಕೆ ಪತ್ರಗಳನ್ನು ಬರೆದ ವ್ಯಕ್ತಿಯ ಬಂಧನವಾಗಿದೆ.ಕನ್ನಡ ಭಾಷೆಯ ಕೆಲ ಪ್ರಮುಖ ಸಾಹಿತಿಗಳಿಗೆ ನಿರಂತರವಾಗಿ ಬೆದರಿಕೆ ಪತ್ರಗಳನ್ನು ಬರೆಯುತ್ತಿದ್ದ. ಸಾಹಿತಿಗಳಿಗೆ ಅವಾಚ್ಯವಾಗಿ ನಿಂದಿಸುತ್ತಾ ಕೋಮು ದ್ವೇಷದ ಭಾವನೆ ಉಂಟು ಮಾಡುವಂತಹ ಪದಗಳನ್ನು ಬಳಸಿ ಪತ್ರ .ಈ ಬಗ್ಗೆ ಚಿತ್ರದುರ್ಗ (1 ಪ್ರಕರಣ)

ಕೊಟ್ಟೂರು (1 ಪ್ರಕರಣ)

ಸಂಜಯ್ ನಗರ( 1 ಪ್ರಕರಣ)

ಹಾರೋಹಳ್ಳಿ(2 ಪ್ರಕರಣ)

ಬಸವೇಶ್ವರ ನಗರ (2 ಪ್ರಕರಣ)

ಪೊಲೀಸ್ ಠಾಣೆ ಸೇರಿದಂತೆ ಒಟ್ಟು 7 ಪ್ರಕರಣಗಳು ದಾಖಲಾಗಿತ್ತು. ಸಾಹಿತಿಗಳ ತಂಡ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ರನ್ನು ಭೇಟಿಯಾಗಿ ಕೇಸ್ ಗೆ ಸಂಬಂಧಿಸಿದಂತೆ ಮಾಹಿತಿ ನೀಡಿರುತ್ತಾರೆ. ಪ್ರಕರಣಗಳನ್ನು ಮುಂದಿನ ತನಿಖೆಯ ಸಲುವಾಗಿ ಸಿಸಿಬಿ ಘಟಕಕ್ಕೆ ವರ್ಗಾವಣೆ ಮಾಡಲಾಗಿತ್ತು. ಎಲ್ಲಾ ಬೆದರಿಕೆ ಪತ್ರಗಳಲ್ಲಿ ಒಬ್ಬನೇ ವ್ಯಕ್ತಿಯ ಬರವಣಿಗೆ ಇದಿದನ್ನು ಎಫ್ ಎಸ್ ಎಲ್ ವರದಿ ಖಚಿತ ಪಡಿಸಿತ್ತು. ಸಿಸಿಬಿಗೆ ವರ್ಗಾವಣೆಗೊಂಡ ಒಂದು ತಿಂಗಳಲ್ಲಿಯೇ ಆರೋಪಿ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ. ಸೆ. 28 ರಂದು ದಾವಣಗೆರೆಯಲ್ಲಿ ಆರೋಪಿಯನ್ನು ಬಂಧನ ಮಾಡಿದ್ದೇವೆ. ಒಟ್ಟು 13 ದಿನಗಳ ಕಾಲ ಕಸ್ಟಡಿ ತೆಗೆದುಕೊಂಡಿದ್ದವೇ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ .

Previous Post

ನನಗೂ ಬ್ಯಾರಿ ಸಮುದಾಯದ ಜೊತೆಗೆ ವ್ಯವಹಾರಿಕವಾಗಿ ವಿಶ್ವಾಸದಲ್ಲಿ ಸಂಬಂಧ ಉಂಟು: ಡಿಕೆಶಿ

Next Post

ಬಿಜೆಪಿ ಟಿಕೇಟ್ ಸಿಗದಿದ್ದರೆ ಯೋಚಿಸಿ ಮುನ್ನಡೆಯುವೆ ಎಂದ ರಮೇಶ ಕತ್ತಿ..!

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಬಿಜೆಪಿ ಟಿಕೇಟ್ ಸಿಗದಿದ್ದರೆ ಯೋಚಿಸಿ ಮುನ್ನಡೆಯುವೆ ಎಂದ ರಮೇಶ ಕತ್ತಿ..!

ಬಿಜೆಪಿ ಟಿಕೇಟ್ ಸಿಗದಿದ್ದರೆ ಯೋಚಿಸಿ ಮುನ್ನಡೆಯುವೆ ಎಂದ ರಮೇಶ ಕತ್ತಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada