ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ್ದ ನಾಗೇಶ್ ನನ್ನು ಬೆಂಗಳೂರು ಪೊಲೀಸರು ೧೬ ದಿನಗಳ ನಂತರ ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ ನಂತರ ಕಳೆದ 16 ದಿನಗಳಿಂದ ತಲೆಮರೆಸಿಕೊಂಡಿದ್ದ ನಾಗೇಶ್ ನನ್ನು ತಮಿಳುನಾಡಿನ ತಿರುವಣ್ಣಾ ಮಲೈನಲ್ಲಿ ಬಂಧಿಸಲಾಗಿದೆ.
ತಮಿಳುನಾಡಿನಲ್ಲಿ ನಾಗೇಶ್ ಸ್ವಾಮೀಜಿ ವೇಷಧರಿಸಿ ತಲೆಮರೆಸಿಕೊಂಡಿದ್ದ ಎನ್ನಲಾಗಿದ್ದು, ನಾಗೇಶ್ ಕೈಗೆ ಪೊಲೀಸರು ಕೈಗೆ ಬೇಡಿ ಹಾಕುತ್ತಿರುವ ವೀಡಿಯೋ ವೈರಲ್ ಆಗಿದೆ.