• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಉಡುಪಿಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಸುಧಾರಣೆಗೆ ಕ್ರಮ; ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 1, 2023
in ಕರ್ನಾಟಕ, ರಾಜಕೀಯ
0
ಉಡುಪಿಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಸುಧಾರಣೆಗೆ ಕ್ರಮ; ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಉಡುಪಿ; ಉಡುಪಿ ( Udupi ) ಹಾಗೂ ಮಂಗಳೂರು ( Mangalore ) ಜಿಲ್ಲೆ ಶೈಕ್ಷಣಿಕವಾಗಿ ( Educational ) ಮುಂಚೂಣಿಯಲ್ಲಿರುವ ಜಿಲ್ಲೆಗಳು. ಉಡುಪಿ ಜಿಲ್ಲೆ ಪ್ರಗತಿಪರ ಜಿಲ್ಲೆಯಾಗಿದ್ದರೂ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಬೆಳವಣಿಗೆ ಕುಂಠಿತಗೊಂಡಿದೆ. ಜಿಲ್ಲೆಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಸುಧಾರಣೆಗೆ ಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ. ಹೀಗಾಗಿ ಮುಂದಿನ

ADVERTISEMENT

ಉಡುಪಿ ಜಿಲ್ಲೆಯಲ್ಲಿ ಜೂನ್ ( June ) ತಿಂಗಳಲ್ಲಿ ವಾಡಿಕೆ ಮಳೆಗಿಂತ ( Rain ) 53 % ಕಡಿಮೆ ಮಳೆಯಾಗಿದ್ದು, ಜುಲೈ ( July ) ತಿಂಗಳಲ್ಲಿ ( Months ) ವಾಡಿಕೆ ಮಳೆಗಿಂತ ಶೇ. 25 ರಷ್ಟು ಹೆಚ್ಚು ಮಳೆಯಾಗಿದೆ. ಸುಮಾರು ಶೇ.79 ಬಿತ್ತನ ಕಾರ್ಯ ಮುಗಿದಿದೆ. ಬೀಜ , ಗೊಬ್ಬರ ರಸಾಯನಿಕಗಳಿಗೆ ಇಲ್ಲಿಯವರೆಗೆ ಕೊರತೆಯಾಗಿಲ್ಲ. ಬೆಳೆಹಾನಿ ಯಾಗಿದ್ದರೆ ಮರು ಬಿತ್ತನೆ ಅಥವಾ ಪರ್ಯಾಯ ಬೆಳೆ ಬೆಳೆಯಲು ಬೀಜ , ಗೊಬ್ಬರ ರಸಾಯನಿಕಗಳನ್ನು ಸರಬರಾಜು ಮಾಡಲು ಜಿಲ್ಲಾಧಿಕಾರಿಗಳು ಮತ್ತು ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಳೆದ ವರ್ಷ ಜುಲೈ ತಿಂಗಳ ವೇಳೆಗೆ ಶೇ. 75 ರಷ್ಟು ಬಿತ್ತನೆಯಾಗಿದ್ದು, ಈ ವರ್ಷ ಶೇ. 79 ರಷ್ಟು ಬಿತ್ತನೆಯಾಗಿದೆ. ಸುಮಾರು 10 ಜನರ ಪ್ರಾಣಿ ಹಾನಿಯಾಗಿದ್ದು, ಅವರಿಗೆ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

ಕಾಲುಸಂಕಗಳ ನಿರ್ಮಾಣಕ್ಕೆ ಕ್ರಮ :


ಕಾಲುಸಂಕಗಳು ಸಮರ್ಪಕವಾಗಿಲ್ಲದಿರುವ ಕಾರಣ ಜನರ ಓಡಾಟಕ್ಕೆ ತೊಂದರೆಯಾಗಿದೆ. ಆದ್ದರಿಂದ ನರೇಗಾ ಮತ್ತು ಲೋಕೋಪಯೋಗಿ ಇಲಾಖೆಯವರು ಜಂಟಿಯಾಗಿ ಕಾಲು ಸಂಕಗಳ ನಿರ್ಮಾಣಕ್ಕಾಗಿ ಯೋಜನೆ ರೂಪಿಸಿ, ನಿರ್ಮಾಣ ಕಾರ್ಯ ಕೈಗೊಳ್ಳಲು ಸೂಚಿಸಲಾಗಿದೆ. ಒಂದು ಕಾಲಸಂಕ ನಿರ್ಮಿಸಲು ಸುಮಾರು 5 ರಿಂದ 10 ಲಕ್ಷ ರೂ.ಗಳು ವೆಚ್ಚವಾಗಲಿದೆ ಎಂದರು.

ಆರೋಗ್ಯ ಸೂಚ್ಯಂಕದಲ್ಲಿ ಕುಸಿತ :

ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಮೊದಲನೇ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆ 2023ರಲ್ಲಿ 13 ನೇ ಸ್ಥಾನಕ್ಕೆ ಇಳಿದಿದೆ. 2015 ರಲ್ಲಿ ಆರೋಗ್ಯ ಸೂಚ್ಯಂಕದಲ್ಲಿ ಒಂದನೇ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆ ಈಗ 19 ನೇ ಸ್ಥಾನಕ್ಕಿಳಿದಿದೆ. 2015-16 ರಲ್ಲಿ ತಾಯಂದಿರ ಮರಣ 1000 ಮಂದಿಗೆ 14 ಮಂದಿ ಇತ್ತು. 2021-22 ರಲ್ಲಿ ಮರಣ ಪ್ರಮಾಣ 126 ಕ್ಕೆ ಏರಿಕೆಯಾಗಿದ್ದು, 2023 ರಲ್ಲಿ 53 ಮರಣ ಸಂಭವಿಸಿದೆ , 2015-16 ರಲ್ಲಿ ಮಕ್ಕಳ ಸಾವಿನ ಪ್ರಮಾಣ 51 ಇದ್ದು , 2022-23 ರಲ್ಲಿ 166 ಮಕ್ಕಳು ಮರಣ ಹೊಂದಿದ್ದಾರೆ. ಇದು ನಮ್ಮ ಸರ್ಕಾರ ಮತ್ತು ಬಿಜೆಪಿ ಸರ್ಕಾರದ ವ್ಯತ್ಯಾಸವನ್ನು ಬಿಂಬಿಸುತ್ತದೆ ಎಂದು ವಿವರಿಸಿದರು.

ಕಡಲಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ :

ಉಡುಪಿ, ದಕ್ಷಿಣ ಕನ್ನಡ , ಉತ್ತರ ಕನ್ನಡ ಜಿಲ್ಲೆಗಗಳಲ್ಲಿ ಕಡಲಕೊರತೆಗಳ ಸಮಸ್ಯೆ ಇದೆ. ಉಡುಪಿ ಜಿಲ್ಲೆಯಲ್ಲಿ 98 ಕಿಮೀ.ಗಳ ಕಡತ ತೀರವಿದೆ. 3 ಜಿಲ್ಲೆಗಳಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲು ಲೋಕೋಪಯೋಗಿ ಇಲಾಖೆಗೆ ಡಿಪಿಆರ್ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಈ ಸುದ್ದಿಯನ್ನೂ ಓದಿ ; ಸಂಸತ್ತು ಮುಂಗಾರು ಅಧಿವೇಶನ | ಗದ್ದಲದ ನಡುವೆ ದೆಹಲಿ ಸೇವಾ ಮಸೂದೆ ಮಂಡನೆ

ಆಡಳಿತವನ್ನು ಚುರುಕುಗೊಳಿಸಲು ಸೂಚನೆ :

ಉಡುಪಿ ಜಿಲ್ಲೆಯಲ್ಲಿ ಸೈಬರ್ ಕ್ರೈಂ, ರಸ್ತೆ ಅಪಘಾತಗಳು, ಸಾವಿನ ಪ್ರಮಾಣ ಹೆಚ್ಚಿದ್ದು, ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳುವುದರ ಜೊತೆಗೆ , ಲೋಕೋಪಯೋಗಿ ಇಲಾಖೆಯವರು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ರಸ್ತೆ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಜಿಲ್ಲಾಮಟ್ಟದ ಆಡಳಿತವನ್ನು ಚುರುಕುಗೊಳಿಸಲು ನಿರ್ಲಕ್ಷ್ಯತನ, ಉದಾಸೀನತೆ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೊಳ್ಳಲಾಗುವುದು ಎಂದರು.

Tags: CM SiddaramaiahdkshivkumarLakshmi hebbalkar
Previous Post

ವರ್ಕ್‌ ರಿಪೋರ್ಟ್‌ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್‌ ಖರ್ಗೆ..!

Next Post

ಪ್ರೀತಿಯಿಂದ ಮಾತ್ರ ದೇಶದಲ್ಲಿ ಈ ದ್ವೇಷದ ಬೆಂಕಿಯನ್ನು ನಂದಿಸಲು ಸಾಧ್ಯ; ರಾಹುಲ್ ಗಾಂಧಿ

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

ನಂಬಿಕಸ್ಥ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಬಿ.ಸಿ ನಾಗೇಶ್ ನೆನೆದು ಬಸವರಾಜ ಬೊಮ್ಮಾಯಿ ಭಾವುಕ

August 19, 2026
Next Post
ಖರ್ಗೆ ಅವರು ಮುಖ್ಯಮಂತ್ರಿಯಾದರೆ ಅವರ ಜತೆ ಕೆಲಸ ಮಾಡಲು ನಾನು ಸಿದ್ಧ: ಡಿಕೆಶಿ

ಪ್ರೀತಿಯಿಂದ ಮಾತ್ರ ದೇಶದಲ್ಲಿ ಈ ದ್ವೇಷದ ಬೆಂಕಿಯನ್ನು ನಂದಿಸಲು ಸಾಧ್ಯ; ರಾಹುಲ್ ಗಾಂಧಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada