ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರನ್ನು ಮಂಗಳವಾರ ಬೆಳಿಗ್ಗೆ ಆರ್ ಟಿ ನಗರದ ಗೃಹ ಕಚೇರಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಭೇಟಿ ಮಾಡಿ ಕಬ್ಬು ದರ ನಿಗದಿಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕೊರೋನ ಸಂಕಷ್ಟದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ರೈತರ ರಕ್ಷಣೆಗಾಗಿ ರೈತರ ಕನಿಷ್ಠ ಆದಾಯ ಖಾತ್ರಿ ಆಯೋಗ ರಚನೆಯಾಗಬೇಕು ಎಂದು ಈ ವೇಳೆ ಮುಖಂಡರು ಒತ್ತಾಯಿಸಿದ್ದಾರೆ ಮುಖ್ಯಮಂತ್ರಿಗಳು ಕೂಡಲೇ ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ದಕ್ಷಿಣ ಕರ್ನಾಟಕದಲ್ಲಿ ಈಗಾಗಲೇ ಕಬ್ಬು ಅರೆಯುವ ಕಾರ್ಯ ಆರಂಭಿಸಿವೆ ಆದರೆ ಪ್ರಸಕ್ತ ಸಾಲಿನಲ್ಲಿ ಕಬ್ಬಿನ ದರ ನಿಗದಿ ಆಗಿಲ್ಲ, ಸಕ್ಕರ ನಿಯಂತ್ರಣ ಕಾಯ್ದೆ 1966 ಪ್ರಕಾರ ಕಬ್ಬು ಪೂರೈಕೆ ಮಾಡಿದ ರೈತರಿಗೆ 14 ದಿನದೊಳಗಾಗಿ ಹಣ ಪಾವತಿಸಬೇಕೆಂಬ ನಿಯಮ ಸಕ್ಕರೆ ನಿಯಂತ್ರಣ ಕಾಯ್ದೆಯಲ್ಲಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಕಬ್ಬು ಬೆಳೆ ಪ್ರದೇಶ ಏರಿಕೆಯಾಗಿದೆ ಸಕ್ಕರೆ ಕಾರ್ಖಾನೆಗಳು ಅವಧಿಗೂ ಮೊದಲೇ ಆರಂಭಿಸಬೇಕೆಂದು ಒತ್ತಾಯಿಸಲಾಗುತ್ತಿದೆ ಆದ್ದರಿಂದ 21- 22 ನೇ ಸಾಲಿಗೆ ಕಬ್ಬಿನ ಎಫ್ ಆರ್ ಪಿ ದರ ನಿಗದಿ ಮಾಡಲು ರಾಜ್ಯ ಸರ್ಕಾರದ ಕಬ್ಬು ಖರೀದಿ ಸರಬರಾಜು ನಿಯಂತ್ರಣ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಬೇಕು ಈ ಸಂಬಂಧ ಕಬ್ಬು ಸರಬರಾಜು ನಿಯಂತ್ರಣ ಮಂಡಳಿ ಸಭೆ ಕರೆದು ಚರ್ಚಿಸಿ ತುರ್ತು ತೀರ್ಮಾನ ಕೈಗೊಳ್ಳಬೇಕು ಎಂದು ಮುಖಂಡರು ಹೇಳಿದ್ದಾರೆ.
ಕೇಂದ್ರ ಸರ್ಕಾರ ಕಬ್ಬಿನ ಎಫ್ ಆರ್ ಪಿ ಬೆಲೆ ನಿಗದಿ ಬಗ್ಗೆ 22 ಅಕ್ಟೋಬರ್ 2020 ರಂದು ಸಕ್ಕರೆ ನಿಯಂತ್ರಣ ಕಾಯ್ದೆ ತಿದ್ದುಪಡಿ ಗೆಜಿಟ್ ಆದೇಶ ಹೊರಡಿಸಿ ರಾಜ್ಯ ಸರ್ಕಾರಗಳಿಗೆ ಅಧಿಕಾರವನ್ನು ನೀಡಿದೆ. ಈ ಆದೇಶದ ಪ್ರಕಾರ ಕೂಡಲೇ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು 2019-20 ಮತ್ತು 2020-21 ನೇ ಸಾಲಿನ ಕಬ್ಬಿನ ಉಪ ಉತ್ಪನ್ನಗಳ ಲಾಭವನ್ನು ರಾಜ್ಯ ಸರ್ಕಾರದ ಕಬ್ಬು ಖರೀದಿ ಸರಬರಾಜು ನಿಯಂತ್ರಣ ಕಾಯ್ದೆ ಅನ್ವಯ ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಸರಬರಾಜು ಮಾಡಿದ ರೈತರಿಗೆ ಲಾಭ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕು .
ಕಬ್ಬು ಖರೀದಿ ಸರಬರಾಜು ನಿಯಂತ್ರಣ ಮಂಡಳಿ ನಿರ್ಧರಿಸಿರುವ ಕಬ್ಬು ಕಟಾವು ಹಾಗೂ ಸಾಗಾಣಿಕೆ ವೆಚ್ಚವನ್ನು 2021-22ನೇ ಸಾಲಿಗೆ ನಿಗದಿ ಮಾಡಬೇಕು. ಕಬ್ಬಿನಿಂದ ಎಥನಾಲ್ ಉತ್ಪಾದಿಸಲು ಹಾಗೂ ಬಳಕೆ ಮಾಡಲು ಎಲ್ಲ ಸಕ್ಕರೆ ಕಾರ್ಖಾನೆಗಳಿಗೆ ಕಡ್ಡಾಯಗೊಳಿಸಬೇಕು, ಎಥನಾಲ್ ಇಂದ ಬರುವ ಲಾಭವನ್ನು ರೈತರಿಗೆ ಹಂಚಿಕೆ ಮಾಡಬೇಕು ಹಾಗೆ ರೈತರು ಆಲೆಮನೆಗಳಲ್ಲಿ ಎಥನಾಲ್ ಉತ್ಪಾದನೆ, ಬಳಕೆ ಮಾಡಿಕೊಳ್ಳಲು ತಂತ್ರಜ್ಞಾನ ರೂಪಿಸಬೇಕು. 2019-20 ಹಾಗೂ 2020-21 ಸಾಲಿನಲ್ಲಿ ಬೆಳಗಾವಿ, ಬಾಗಲಕೋಟೆ, ಗುಲ್ಬರ್ಗ, ಬಿಜಾಪುರ, ಮಂಡ್ಯ, ಜಿಲ್ಲೆಗಳಲ್ಲಿ ರೈತರಿಗೆ ಬಾಕಿ ಕೊಡಬೇಕಾಗಿರುವ ಕಬ್ಬಿನ ಹಣವನ್ನು ಕೊಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸಕ್ಕರೆ ಕಾರ್ಖಾನೆಗಳು ಕಬ್ಬು ಒಪ್ಪಂದ ಮಾಡಿಕೊಳ್ಳುತ್ತೇವೆ ಎಂದು ರೈತರ ದಾಖಲಾತಿಗಳನ್ನು ಪಡೆದು ಬ್ಯಾಂಕ್‌ಗಳಲ್ಲಿ ಅಡಮಾನ ಇಟ್ಟು ಸಾಲ ಪಡೆಯುತ್ತಾರೆ ಇಂತಹ ವಂಚನೆಗಳ ಬಗ್ಗೆ ಪ್ರಕರಣ ದಾಖಲಿಸಬೇಕು ಮತ್ತು ಕೆಲವು ಸಕ್ಕರೆ ಕಾರ್ಖಾನೆಗಳು ಸಹಕಾರಿ ಬ್ಯಾಂಕಗಳನ್ನು ಆರಂಭಿಸಿ ಕಬ್ಬಿನ ಹಣ ಪಾವತಿ ಮತ್ತಿತರ ಕಾರ್ಯಗಳನ್ನು ನಡೆಸುತ್ತಿದ್ದೇವೆ ಎಂದು ಹೇಳಿ ರೈತರಿಗೆ ವಂಚಿಸುತ್ತಿದ್ದಾರೆ ಹಣ ಪಾವತಿ ಆಗಿಲ್ಲದಿದ್ದರೂ ಬ್ಯಾಂಕ್ ಮೂಲಕ ಪಾವತಿಸಿದ್ದೇವೆ ಎಂದು ಸರ್ಕಾರಕ್ಕೆ ಲೆಕ್ಕ ತೋರಿಸುತ್ತಿದ್ದಾರೆ ಇದನ್ನು ತಪ್ಪಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಅತಿವೃಷ್ಠಿ ,ಪ್ರವಾಹದಿಂದ ಹಾನಿಯಾಗಿರುವ ಕಬ್ಬು ಬೆಳೆಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ ಕಬ್ಬಿನ ಬೆಳೆಯನ್ನು ಫಸಲ್ ಭೀಮಾ ಬೆಳೆ ವಿಮೆ ಯೋಜನೆ ವ್ಯಾಪ್ತಿಗೆ ಸೇರಿಸಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಲಾಗಿದೆ.