• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಶಾ ಕಾರ್ಯಕರ್ತೆಯರ ಎಲ್ಲಾ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ಕ್ರಮ: ಡಾ.ಕೆ.ಸುಧಾಕರ್

ಪ್ರತಿಧ್ವನಿ by ಪ್ರತಿಧ್ವನಿ
February 14, 2023
in Top Story, ರಾಜಕೀಯ
0
ಆಶಾ ಕಾರ್ಯಕರ್ತೆಯರ ಎಲ್ಲಾ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ಕ್ರಮ: ಡಾ.ಕೆ.ಸುಧಾಕರ್
Share on WhatsAppShare on FacebookShare on Telegram

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಎಷ್ಟು ಹೆಚ್ಚಿಸಬೇಕು ಎಂದು ತೀರ್ಮಾನ ಮಾಡಿ ಬಜೆಟ್‌’ನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ADVERTISEMENT

ಬೆಂಗಳೂರಿನ ಶಿಕ್ಷಕರ ಸದನದಲ್ಲಿ, ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡ ಸಚಿವ ಡಾ.ಕೆ.ಸುಧಾಕರ್, ಸಂಘದ ಮನವಿ ಸ್ವೀಕರಿಸಿ ಮಾತನಾಡಿದರು.

ನಾನು ಆರೋಗ್ಯ ಸಚಿವನಾದ ಬಳಿಕ ಪ್ರತಿ ವರ್ಷದಂತೆ ಎರಡು ಬಾರಿ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹೆಚ್ಚಿಸಲು ಪಾತ್ರ ವಹಿಸಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ತಮ್ಮ ಮೊದಲ ಬಜೆಟ್‌’ನಲ್ಲಿ ಗೌರವಧನವನ್ನು 1,000 ರೂ. ಹೆಚ್ಚಿಸಿದ್ದಾರೆ. ಈ ಸಲ ಕೂಡ ಆಶಾ ಕಾರ್ಯಕರ್ತೆಯರ ಕೆಲ ಮನವಿಗಳನ್ನು ನೀಡಿದ್ದು, ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸಲು ಕ್ರಮ ವಹಿಸಲಾಗುವುದು ಎಂದರು.

ಆಶಾ ಕಾರ್ಯಕರ್ತೆಯರ ಪ್ರತಿನಿಧಿಯಾಗಿ ನಾನು ಕೆಲಸ ಮಾಡುತ್ತೇನೆ. ಇತ್ತೀಚೆಗೆ ಬಜೆಟ್‌ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆದ ಸಂದರ್ಭದಲ್ಲಿ  ಆಶಾ ಕಾರ್ಯಕರ್ತೆಯರಿಗೆ ಗೌರವಧನವನ್ನು 2,000 ರೂ. ಹೆಚ್ಚಿಸಲು ಮನವಿ ಮಾಡಲಾಗಿದೆ. ಈ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಲಾಗುವುದು ಎಂದರು.

ಆಶಾ ಕಾರ್ಯಕರ್ತೆಯರಿಗೆ 5 ಕೋಟಿ ರೂ. ಮೊತ್ತದ ಕ್ಷೇಮಾಭಿವೃದ್ಧಿ ನಿಧಿ ಇರಿಸಿ, ಕಾರ್ಯಕರ್ತೆಯರ ಆರೋಗ್ಯ ರಕ್ಷಣೆಗೆ ನೀಡಬೇಕು ಎಂಬ ಬೇಡಿಕೆ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ತಾಂತ್ರಿಕ ನ್ಯೂನತೆ ನಿವಾರಿಸಿ, ಸರಿಯಾದ ಸಮಯಕ್ಕೆ ಗೌರವಧನ ನೀಡಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.

ಕೋವಿಡ್‌ ಸಮಯದಲ್ಲಿ ಅನೇಕರು ವರ್ಕ್‌ ಫ್ರಂ ಹೋಮ್‌ ಮಾಡಿದ್ದಾರೆ. ಆದರೆ ಆಶಾ ಕಾರ್ಯಕರ್ತೆಯರು ವರ್ಕ್‌ ಫ್ರಂ ಸ್ಟ್ರೀಟ್‌ ಮಾಡಿದ್ದರು. 10 ವರ್ಷಗಳ ಕಾಲ ಸೇವೆ ಸಲ್ಲಿಸಿದವರು ಅಥವಾ 60 ವಯಸ್ಸಿನ ಬಳಿಕ ನಿವೃತ್ತರಾಗಲು ಬಯಸಿದರೆ, ಅವರಿಗೆ ಇಡಿಗಂಟು ನೀಡಲು ಕ್ರಮ ವಹಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಚರ್ಚಿಸಲಾಗುವುದು. ಕೇವಲ ಮಾತಿನಲ್ಲಲ್ಲ, ಕೃತಿಯ ಮೂಲಕ ಕೊಡುಗೆ ನೀಡಲಾಗುವುದು ಎಂದರು.

ಆಶಾ ಕಾರ್ಯಕರ್ತೆಯರ ಸೇವೆಯನ್ನು ಮೆಚ್ಚಿ ವಿಶ್ವ ಆರೋಗ್ಯ ಸಂಸ್ಥೆಯು ʼಜಾಗತಿಕ ನಾಯಕರುʼ ಎಂದು ಕರೆದಿದೆ. ಆಶಾ ಎಂದರೆ ಭರವಸೆ ಎಂದರ್ಥ. ಇಡೀ ವಿಶ್ವವೇ ನಂಬಿಕೆ, ಭರವಸೆಯ ಮೇಲೆ ನಿಂತಿದೆ. ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಮೇಲೆ ಸಂಪೂರ್ಣ ಭರವಸೆ ಇದ್ದು, ಯಾವುದೇ ಆಶಾ ಕಾರ್ಯಕರ್ತೆಯರು ಅದನ್ನು ಹುಸಿ ಮಾಡಲಿಲ್ಲ ಎಂದರು.

Tags: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ಆಶಾ ಕಾರ್ಯಕರ್ತೆಯರುಬಿಜೆಪಿ
Previous Post

ಕಳೆದ ಮೂರು ವರ್ಷಗಳಲ್ಲಿ ಅಲ್ಪಸಂಖ್ಯಾತರ ಆಯೋಗಕ್ಕೆ ದಾಖಲಾದ ದೂರುಗಳಲ್ಲಿ ಹೆಚ್ಚಳವನ್ನು ತೋರಿಸುತ್ತಿದೆ ಸರ್ಕಾರಿ ಅಂಕಿ ಅಂಶಗಳು: ಅಗ್ರಸ್ಥಾನದಲ್ಲಿ ಯುಪಿ, ದೆಹಲಿ

Next Post

ಆ ತಾಯಿ ಬಗ್ಗೆ ಮಾತನಾಡಲ್ಲ: ಸುಮಲತಾ ಬಗ್ಗೆ ನಿಖಿಲ್ ಕುಮಾರಸ್ವಾಮಿ ಮೃದು ಧೋರಣೆ

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
ಆ ತಾಯಿ ಬಗ್ಗೆ ಮಾತನಾಡಲ್ಲ: ಸುಮಲತಾ ಬಗ್ಗೆ ನಿಖಿಲ್ ಕುಮಾರಸ್ವಾಮಿ ಮೃದು ಧೋರಣೆ

ಆ ತಾಯಿ ಬಗ್ಗೆ ಮಾತನಾಡಲ್ಲ: ಸುಮಲತಾ ಬಗ್ಗೆ ನಿಖಿಲ್ ಕುಮಾರಸ್ವಾಮಿ ಮೃದು ಧೋರಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada