ಬೆಂಗಳೂರು : ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಅಡಿಯಲ್ಲಿ ರಾಜ್ಯಾದ್ಯಂತ ಡಿಜಿಟಲ್ ಆರ್ಥಿಕತೆಯನ್ನು ಉತ್ತೇಜಿಸಲು, ಬೆಂಗಳೂರು ಸೇರಿದಂತೆ ಬೆಳಗಾವಿ, ಮೈಸೂರು, ಮಂಗಳೂರಿನಂತಹ ನಗರಗಳಲ್ಲೂ ನವೋದ್ಯಮ ಸ್ನೇಹಿ ವಾತಾವರಣ ನಿರ್ಮಿಸಿ, ಅಲ್ಲಿನ ಫಿನ್ ಟೆಕ್ ಕಂಪನಿಗಳನ್ನು ಯುನಿಕಾರ್ನ್ ಸಂಸ್ಥೆಗಳಾಗಿ ಬೆಳೆಸಲು ಸರ್ಕಾರ ವಿಶೇಷ ಕಾಳಜಿ ವಹಿಸಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ .
ಬೆಂಗಳೂರನ್ನು ಸ್ಟಾರ್ಟಪ್ ರಾಜಧಾನಿಯಾಗಿಸಿದಂತೆ ರಾಜ್ಯವನ್ನು ಡಿಜಿಟಲ್ ಆರ್ಥಿಕತೆಯ ರಾಜಧಾನಿಯನ್ನಾಗಿಸಲು ಬೇಕಾದ ಎಲ್ಲಾ ಕ್ರಮ ವಹಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಇಂದು ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಸಭೆ ನಡೆಸಿದರು .