• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಇನ್‌ಫೋಸಿಸ್‌ನಲ್ಲಿ ಅಕ್ಷತಾ ಷೇರು | ಸುಧಾಮೂರ್ತಿ ಟೀಕಿಸಿದ ನಟ ಚೇತನ್‌ ಅಹಿಂಸಾ

ಪ್ರತಿಧ್ವನಿ by ಪ್ರತಿಧ್ವನಿ
August 29, 2023
in ಇದೀಗ, ಕರ್ನಾಟಕ, ದೇಶ
0
ನಟ ಚೇತನ್‌ ಅಹಿಂಸಾ
Share on WhatsAppShare on FacebookShare on Telegram

ನಟ ಚೇತನ್ ಅಹಿಂಸಾ ಸೋಷಿಯಲ್ ಮೀಡಿಯಾದಲ್ಲಿ ಸದಾ ಒಂದಿಲ್ಲೊಂದು ಪೋಸ್ಟ್ಗಳ ಮೂಲಕವೇ ಸದ್ದು ಮಾಡುತ್ತಿರುತ್ತಾರೆ. ಪರ ವಿರೋಧ ಚರ್ಚೆಗೂ ಮುನ್ನುಡಿ ಬರೆಯುತ್ತಿರುತ್ತಾರೆ. ಅನಿಸಿದ್ದನ್ನು ನೇರವಾಗಿ ಹೇಳಿಕೊಳ್ಳುವ ಮೂಲಕ ಜಾಲತಾಣದಲ್ಲಿ ಕಿಚ್ಚು ಹಚ್ಚುತ್ತಿರುತ್ತಾರೆ.

ADVERTISEMENT

ಇದೀಗ ಮತ್ತೊಮ್ಮೆ ಸುಧಾಮೂರ್ತಿ ಅವರ ಬಗ್ಗೆ ಮಾತನಾಡಿದ್ದಾರೆ ಸಾಮಾಜಿಕ ಹೋರಾಟಗಾರರೂ ಆಗಿರುವ ಚೇತನ್.

ಸಿನಿಮಾಗಳಿಂದ ದೂರವೇ ಉಳಿದಿರುವ ಚೇತನ್ ಸದ್ಯ ಪೂರ್ಣ ಪ್ರಮಾಣದಲ್ಲಿ ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಾಮಾಜಿಕ ಕಳಕಳಿಯ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಈ ನಡುವ ಇನ್ಫೋಸಿಸ್ನ ಸುಧಾಮೂರ್ತಿ ಮತ್ತವರ ಕುಟುಂಬದ ಬಗ್ಗೆ, ಮತ್ತೆ ಮಾತನಾಡಿದ್ದಾರೆ. ಈ ಹಿಂದೆ ಸಸ್ಯಾಹಾರ ಮಾಂಸಾಹಾರದ ಬಗ್ಗೆ ತಮ್ಮ ಅನಿಸಿಕೆ ಹೇಳಿದ ಸುಧಾಮೂರ್ತಿ ಅವರಿಗೆ ಪರೋಕ್ಷವಾಗಿ ತಿವಿವಿದ ಚೇತನ್, ಈ ಸಲ ಈ ಕುಟುಂಬದ ಬಗ್ಗೆ ಮಾತನಾಡಿದ್ದಾರೆ.

ಇದು ನಾಚಿಕೆಗೇಡಿನ ಕೆಲಸ ಎಂದ ಚೇತನ್

ಇಂಗ್ಲೆಂಡ್ನ ಪ್ರಧಾನಿ ರಿಷಿ ಸುನಕ್, ಸುಧಾ ಮೂರ್ತಿ ಮತ್ತು ನಾರಾಯಣ ಮೂರ್ತಿಯವರ ಅಳಿಯ. ಅಂದರೆ ಅಕ್ಷತಾ ಅವರ ಪತಿ. ಇದೀಗ ಭಾರತ ಮತ್ತು ಇಂಗ್ಲೆಂಡ್ ನಡುವಣ ಏರ್ಪಡುತ್ತಿರುವ ವ್ಯಾವಹಾರಿಕ ಸಂಬಂಧದ ಬಗ್ಗೆ, ಚೇತನ್‌ ಮಾತನಾಡಿದ್ದಾರೆ. ಅವರ ಸೋಷಿಯಲ್ ಮೀಡಿಯಾ ಹೇಳಿಕೆ ಈ ರೀತಿ ಇದೆ.

“ಭಾರತ ಮತ್ತು ಯುಕೆ ಪ್ರಸ್ತುತ ಅಂತರರಾಷ್ಟ್ರೀಯ ವ್ಯಾಪಾರ ಒಪ್ಪಂದದ ಮಾತುಕತೆ ನಡೆಸುತ್ತಿವೆ. ಯುಕೆ ಪ್ರಧಾನಿಯವರ ಪತ್ನಿ ಅಕ್ಷತಾ ಅವರು (ನಾರಾಯಣ ಮತ್ತು ಸುಧಾ ಮೂರ್ತಿಯವರ ಪುತ್ರಿ) ಇನ್ಫೋಸಿಸ್ನಲ್ಲಿ 5,000 ಕೋಟಿ ರೂಪಾಯಿ ಷೇರುಗಳನ್ನು ಹೊಂದಿರುವುದುಂಡ ಯುಕ್ತ ಪ್ರಧಾನಿ ರಿಷಿ ಸುನಕ್ ಅವರ ಕುಟುಂಬವು ಈ ವ್ಯಾಪಾರ ಒಪ್ಪಂದದಿಂದ ಶೀಘ್ರವಾಗಿ ಪ್ರಯೋಜನ ಪಡೆಯಲಿದೆ. ಇಂತಹ ನಾಚಿಕೆಗೇಡಿನ ಕ್ರೋವಿ ಕಾಪಿಟಲಿಸಂ ಸ್ವೀಕಾರಾರ್ಹವಲ್ಲ, ಇದು ಅನೈತಿಕ ಮತ್ತು ಅಸಹ್ಯಕರವಾಗಿದೆ’ ಎಂದು ಹೇಳಿಕೊಂಡಿದ್ದಾರೆ.

pic.twitter.com/giF22j81Ue

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) August 28, 2023

ಸಸ್ಯಾಹಾರ ಬಗ್ಗೆಯೂ ಚೇತನ್ ಕಾಮೆಂಟ್..

ಇತ್ತೀಚೆಗಷ್ಟೇ ಸಾಕಾರ ಮತ್ತು ಮಾಂಸಾಹಾರಕ್ಕೆ, ಕುರಿತಾಗಿ ಸುಧಾ ಮೂರ್ತಿ ಅವರು ತಮ್ಮ ಹೇಳಿಕೆ ನೀಡಿದರು. ಅವರ ಆ ವಿಚಾರ ಕೆಲವರನ್ನು ತೀವು ಕರಳಿಸುವಂತೆ ಮಾಡಿತ್ತು. ಇತ್ತೀಚೆಗೆ ಯಗೆ ನೀಡಿದ ಸಂದರ್ಶನ

ಮಾತನಾಡಿದ್ದ ಸುಧಾ ಮೂರ್ತಿ, ‘ನಾನು ಶುದ್ಧ ಸಸ್ಯಾಹಾರಿ, ಅದಾವ ಮಟ್ಟಿಗೆ ಎಂದರೆ, ನಾನು ಮೊಟ್ಟೆ ಮತ್ತು ಬೆಳ್ಳುಳ್ಳಿಯನ್ನೂ ತಿನ್ನುವುದಿಲ್ಲ ಎಂದಿದ್ದರು.

ಇವರ ಈ ಮಾತಿಗೆ ಪ್ರತಿಕ್ರಿಯಿಸಿದ್ದ ಚೇತನ್, “ಸುಧಾ ಮೂರ್ತಿಯವರು ನಮ್ಮ ಬ್ರಾಹ್ಮಣ್ಯ ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಕಪ್ನಿಂದ ಗುರುತಿಸಲ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ ಅವರು ತನ್ನ ಸೀಮಿತ ಮಡಿವಂತಿಕೆಯ ಚಿಂತನೆಯನ್ನು ಬಹಿರಂಗಪಡಿಸುವ ಹೇಳಿಕೆಗಳನ್ನು ನಿರಂತರವಾಗಿ ಮಾಡುತ್ತಾರೆ. ಸುಧಾ ಮೂರ್ತಿಯವರು ಹೆಚ್ಚು ಮಾತನಾಡಬೇಕು. ಅವರ ಆಸ್ತಿ ಜಗದಗಲ ತಿಳುವಳಿಕೆ ಚಮಚದಗಲ’ ಎಂದು ಲೇವಡಿ ಮಾಡಿದ್ದರು.

Tags: Actor ChetanActor Chetan AhimsaAkshatachetan ahimsaInfosyssudha murthyಅಕ್ಷತಾಇನ್‌ಫೋಸಿಸ್‌ಚೇತನ್‌ ಅಹಿಂಸಾನಟ ಚೇತನ್‌ ಅಹಿಂಸಾಸುಧಾಮೂರ್ತಿ
Previous Post

Breaking: ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 200 ರೂ. ಇಳಿಕೆ

Next Post

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆಸೆಟ್ ದಿನಾಂಕ ಪ್ರಕಟ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಕೆ-ಸೆಟ್‌

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆಸೆಟ್ ದಿನಾಂಕ ಪ್ರಕಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada