ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಹೈಕೋರ್ಟ್ ನಲ್ಲಿ ಜಾಮೀನು ಪಡೆದು ಸದ್ಯ ರಿಲೀಸ್ ಆಗಿರುವ ನಟ ದರ್ಶನ್ (Actor Darshan) ಅವರ ಜಾಮೀನು ಪ್ರಶ್ನಿಸಿ ಪೊಲೀಸರು ಈಗಾಗಲೇ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದಾರೆ.ಪೊಲೀಸರ ಮೇಲ್ಮನವಿ ಅರ್ಜಿ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ.

ಹೌದು, ಜನವರಿ 24 ರಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಲಿದೆ. ಸುಪ್ರೀಂ ಕೋರ್ಟ್ ನಲ್ಲಿ (Supreme court) ದರ್ಶನ್ ಅವರ ಜಾಮೀನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಒಟ್ಟು ನಟ ದರ್ಶನ್, ಪವಿತ್ರಾಗೌಡ (Pavitra gowda) ಸೇರಿ ಏಳು ಆರೋಪಿಗಳ ಜಾಮೀನು ಪ್ರಶ್ನಿಸಿ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ.

ಕಳೆದ ಡಿಸೆಂಬರ್ ನಲ್ಲಿ ಹೈಕೋರ್ಟ್ ನಲ್ಲಿ ಆರೋಪಿಗಳು ಜಾಮೀನು ಪಡೆದಿದ್ದರು.ಇದೇ ಜನವರಿ 6 ರಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ ಪೊಲೀಸರು, ನಟ ದರ್ಶನ್, ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಮತ್ತು ಪ್ರದೋಷ್ ಜಾಮೀನು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಹೀಗಾಗಿ ಪೊಲೀಸರ ಈ ನಡೆಯಿಂದ ನಟ ದರ್ಶನ್ ಸೇರಿ ಏಳು ಆರೋಪಿಗಳಿಗೆ ಮತ್ತೆ ಕಂಟಕ ಎದುರಾಗುವ ಸಾಧ್ಯತೆಯಿದೆ. ಸುಪ್ರೀಂ ಕೋರ್ಟ್ ನಲ್ಲಿ ದರ್ಶನ್ ಆಂಡ್ ಗ್ಯಾಂಗ್ ಗೆ ರಿಲೀಫ್ ಸಿಗುತ್ತಾ ಅಥವಾ ಸಂಕಷ್ಟ ಎದುರಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.