
ರೇಣುಕಸ್ವಾಮಿ ಕೊಲೆ ಪ್ರಕರಣದ (Renukaswamy murder case) ಆರೋಪಿ ನಟ ದರ್ಶನ್ (Actor darshan) ಜಾಮೀನು ರದ್ದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದ್ದು ನಟ ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದಾಗಿದೆ .

ಈ ಪ್ರಕರಣದಲ್ಲಿ ಹೈಕೋರ್ಟ್ ಎಲ್ಲಾ 17 ಆರೋಪಿಗಳಿಗೆ ಜಾಮೀನು ನೀಡಿತ್ತು. ಆದ್ರೆ ಈ ನಡೆ ಸರಿಯಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಈ ಮುನ್ನವೇ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಕೇಸ್ ನಲ್ಲಿ ಹೈಕೋರ್ಟ್ ತನ್ನ ವಿವೇಚನೆಯನ್ನು ಬಳಸಿಕೊಂಡ ರೀತಿ ಸರಿಯಲ್ಲ ಎಂದು ಹೇಳಿತ್ತು.

ಇದೀಗ ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಇಂದು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮಹದೇವನ್ ಅವರನ್ನೊಳಗೊಂಡ ಪೀಠವ ಈ ಆದೇಶ ನೀಡಿದೆ. ಹೀಗಾಗಿ ಇಂದೇ ದರ್ಶನ್ ಅರೆಸ್ಟ್ ಆಗುವ ಸಾಧ್ಯತೆಯಿದೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಒಟ್ಟು 7 ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸುವಂತೆ ಪೊಲೀಸರೂ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ಈ ಪ್ರಕರಣ ಆದೇಶ ಹೊರಬಿದ್ದಿದ್ದು ದರ್ಶನ್‌ಗೆ ಜಾಮೀನು ರದ್ದಾಗಿದೆ.












